ಬೆಂಗಳೂರು: ಇಂದು ಸುಮಲತಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಸುಮಲತಾ ಸೇರ್ಪಡೆ ಆಗುತ್ತಿದ್ದು, ಅದಕ್ಕೂ ಮುನ್ನ ಕಂಠೀರವ ಸ್ಡುಡಿಯೋದ ಆವರಣದಲ್ಲಿರುವ ಅಂಬರೀಶ್ (Ambareesh) ಅವರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಈಗಾಗಲೇ ಅಂಬಿ ಸಮಾಧಿಯನ್ನು ಹೂಗಳಿಂದ ಅಲಂಕಾರ ಮಾಡಲಾಗಿದೆ
ಭಕ್ತಿಗೀತೆ ಹಾಕಿದ್ದಕ್ಕೆ ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಕೇಸ್ – ಹಲ್ಲೆಗೊಳಗಾದವನ ವಿರುದ್ಧವೂ FIR ದಾಖಲು!
ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ (Sumalta Ambarish), ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಕೊನೆಯ ಕ್ಷಣದಲ್ಲಿ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಆದರೂ, ಅವರು ಬಿಜೆಪಿ (BJP) ಸೇರುತ್ತಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದುಕೊಂಡಿದ್ದಾರೆ.
ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ.