ಬೆಳಗಾವಿ-ಬಾಗಲಕೋಟೆ ಜಿಲ್ಲೆ ಬೆಸುಗೆ ಮಾಡುವಲ್ಲಿ ಮಹತ್ತರ ಯೋಜನೆಯಾಗಿರುವ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಜಾಕವೆಲ್ನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಮಹಿಷವಾಡಗಿ ಬ್ಯಾರೇಜ್ ಕಾಮಗಾರಿ ನಿಧಾನಗತಿಯಲ್ಲಿ ಸಾಗ್ತಾ ಇದೆ ಮತ್ತು ಸುಮಾರು ಹತ್ತು ವರ್ಷಗಳಿಂದ ನಿರಂತರವಾಗಿ ಕಾಮಗಾರಿ ನಡೀತಾನೆ ಇದೆ ಆದರೆ ಇಲ್ಲಿವರೆಗೂ ಪೂರ್ಣಗೊಂಡಿಲ್ಲ ಮತ್ತು ಅಸ್ತಿ ಪಂಜರದಂತೆ ಬ್ಯಾರೇಜ್ ಅನಾಥವಾಗಿ ನಿಂತಿರುವದು ಬೇಸರ ತರುವಲ್ಲಿ ಕಾರಣವಾಗಿದೆ.
2018 ರಲ್ಲಿ ಅಂದಿನ ಸಚಿವೆ ಉಮಾಶ್ರೀಯವರು 30 ಕೋಟಿ ರೂ.ಗಳಷ್ಟು ಟೆಂಡರ್ ಕಾಮಗಾರಿ ಮೂಲಕ ನಾಗಾರ್ಜುನ ಕನಸ್ಟ್ರಕ್ಸನ್ಸ್ ಕಂಪನಿಗೆ ನೀಡಿತ್ತು. ಕಳೆದ ಐದು ವರ್ಷಗಳಲ್ಲಿ ಕೇವಲ ಶೇ.25 ರಷ್ಟು ಮಾತ್ರ ಕಾಮಗಾರಿ ನಡೆದಿದೆ.ಇದಕ್ಕೆ ಪೂರಕವಾಗಿ 2021 ರಲ್ಲಿ ಕಾಮಗಾರಿಗೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಹಾಲಿ ಶಾಸಕ ಸಿದ್ದು ಸವದಿ ಈ ಟೆಂಡರ್ ಕಾಮಗಾರಿಯನ್ನು 40 ಕೋಟಿ ರೂ.ಗಳವರೆಗೆ ಹೆಚ್ಚಳಗೊಳಿಸುವ ಮೂಲಕ ಕಾಮಗಾರಿ ಮತ್ತಷ್ಟು ಒಳ್ಳೆಯ ಹಾಗು ವಿಸ್ತರಣೆಯಾಗಲೆಂದು ಸರ್ಕಾರದಿಂದ ಅನುಮೋದನೆ ಮಾಡಿದ್ದರು.
ಗುತ್ತಿಗೆಯನ್ನು ಪಡೆದಿರುವ ತೇಜಸ್ ಕನಸ್ಟಂಕ್ಷನ್ಸ್ ಕಂಪನಿಯು ಕಾಮಗಾರಿಯನ್ನು ನಿಧಾನಗತಿಯಲ್ಲಿ ನಡಿತಾ ಇರೋದನ್ನ ನೋಡಿ ಸಾರ್ವಜನಿಕರು ಅಧಿಕಾರಿಗಳು ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗು ಜನಪ್ರತಿನಿಧಿಗಳು ಯಾವದೇ ಕ್ರಮ ಕೈಗೊಳ್ಳದಿರುವದು ತಾಲೂಕಿನ ಜನತೆಗೆ ಬೇಸರ ಮೂಡಿಸುವಲ್ಲಿ ಕಾರಣವಾಗಿದೆ.ಇವೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಸರ್ಕಾರ ಅಥವಾ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಬೇಗನೆ ಕಾಮಗಾರಿ ಮುಗಿಸಿ ಬ್ರಿಜ್ಜ್ ನಿರ್ಮಿಸಬೇಕೆಂದು ನಾಗರಿಕರ ಒತ್ತಾಯವಾಗಿದೆ.
ಪ್ರಕಾಶ ಕುಂಬಾರ
ಬಾಗಲಕೋಟೆ