ಚಿತ್ರದುರ್ಗ : ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು ಹಣ ಅಲ್ಲವೇ ದೇಶದ ಜನಕ್ಕೆ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.ಮಾತನಾಡಿದ ಅವರು,
ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯನ ಕುಟುಂಬಕ್ಕೆ 15 ಲಕ್ಷ ರೂಪಾಯಿ ಕೊಡ್ತೀವಿ ಅಂದ್ರಲ್ಲಾ ಕೊಟ್ರಾ? ರೈತರ ಆದಾಯ ದುಪ್ಪಟ್ಟು ಮಾಡ್ತೀವಿ ಅಂತ ಭಾಷಣ ಮಾಡಿದ್ರು. ಆದಾಯ ಒಂದು ರೂಪಾಯಿ ಕೂಡ ಹೆಚ್ಚಾಗಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರಲ್ಲಾ? ಮಾಡಿದ್ರಾ ಮೋದಿಯವರೇ? ಎಂದು ಕೇಳಿದರು. ಪೆಟ್ರೋಲ್, ಡೀಸೆಲ್, ಅಡುಗೆ ಗ್ಯಾಸ್, ರಸಗೊಬ್ಬರ, ಎಣ್ಣೆ,
ಒಂದೇ ರೂಂನಲ್ಲಿ ಗಂಡ-ಹೆಂಡತಿ, ಸ್ನೇಹಿತೆಯ ನಿಗೂಢ ಸಾವು: ವಾಮಾಚಾರಕ್ಕೆ ಬಲಿಯಾದ್ರಾ..?
ಕಾಳು ಬೇಳೆ ಎಲ್ಲವೂ ಅತ್ಯಂತ ಕಡಿಮೆ ಬೆಲೆಗೆ ಸಿಗುವಂತೆ ಮಾಡ್ತೀನಿ ಅಂದಿದ್ರಲ್ಲಾ ಮಾಡಿದ್ರಾ ಮಿಸ್ಟರ್ ಮೋದಿ? ನಿಮ್ಮ ಕಾಲದಲ್ಲಿ ಆದ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ಕೊಂಚ ನೆಮ್ಮದಿ ನೀಡಬೇಕು ಎನ್ನುವ ಕಾರಣದಿಂದ ಐದು ಗ್ಯಾರಂಟಿ ಜಾರಿ ಮಾಡಿದೆವು. ಪ್ರತೀ ಕುಟುಂಬಕ್ಕೆ 4 ರಿಂದ 6 ಸಾವಿರ ರೂಪಾಯಿ ಉಳಿತಾಯವಾಗಿ ನನ್ನ ಜನರ ಕೊಳ್ಳುವ ಶಕ್ತಿ ಹೆಚ್ಚಾಯಿತು. ಇದು ನಮ್ಮ ಸಾಧ್ಯವಾಗಿದ್ದು ಕಾಂಗ್ರೆಸ್ ಸರ್ಕಾರದಿಂದ ಮಿಸ್ಟರ್ ಮೋದಿಯವರೇ ಎಂದು ಪ್ರಶ್ನಿಸಿದರು.