ಸನ್ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಟ ನಡೆಯಲಿದೆ.
ಐಪಿಎಲ್ 2024 ರ 18 ನೇ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಟಾಸ್ ಗೆದ್ದ ಹೈದರಾಬಾದ್ ನಾಯಕ ಪ್ಯಾಟ್ ಕಮ್ಮಿನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಇಂದು, ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಈ ಟೂರ್ನಿಯ ಇತಿಹಾಸದಲ್ಲಿ ಅತಿದೊಡ್ಡ ಮೊತ್ತವನ್ನು ಕಲೆಹಾಕಿದ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸುತ್ತಿದೆ
ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದು ಮತ್ತೆ ಗೆಲುವಿನ ಟ್ರ್ಯಾಕ್ಗೆ ಮರಳುವುದರ ಮೇಲೆ ಕಣ್ಣಿಟ್ಟಿವೆ.