ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಸುದೀರ್ಘ ತನಿಖೆ ನಡೆಸಲು ಕಾನೂನಿನಲ್ಲಿ ಅವಕಾಶವಿದೆಯೇ ಎಂದು ಹೈಕೋರ್ಟ್, ಸಿಬಿಐಗೆ ಪ್ರಶ್ನಿಸಿದೆ. ರಾಜ್ಯ ಸರಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳು ನ್ಯಾ ಕೆ. ಸೋಮಶೇಖರ್ ಮತ್ತು ನ್ಯಾ. ಉಮೇಶ್ ಎಂ. ಅಡಿಗ ಅವರಿದ್ದ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಂದವು.
ಸಿಬಿಐ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಪೀಠ, ”ಸುದೀರ್ಘ ತನಿಖೆಗೆ ಕಾನೂನಿನಲ್ಲಿ ಅವಕಾಶವಿದೆಯೇ? ಸಿಆರ್ಪಿಸಿ ಅಡಿ ತನಿಖೆಗೆ ಕಾಲಮಿತಿ ಇಲ್ಲವೇ,” ಎಂದು ಪ್ರಶ್ನೆ ಮಾಡಿತು. ಸಮಯಾವಕಾಶದ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಏ 18ಕ್ಕೆ ಮುಂದೂಡಿತು.
ತೆರೆಗೆ ಬರಲಿ ಬೆಂಗಳೂರು ನಿರ್ಮಾತೃ ಕೆಂಪೇಗೌಡ ಸಿನಿಮಾ…! ನಿರ್ದೇಶನ ಮಾಡುತ್ತಿರುವುದು ಯಾರು?
ಸಿಬಿಐ ಪರ ವಾದ ಮಂಡಿಸಿದ ವಕೀಲ ಪಿ. ಪ್ರಸನ್ನಕುಮಾರ್, ”ಸರಕಾರವು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಆದೇಶದಲ್ಲಿ ಕಾರಣಗಳನ್ನು ನೀಡಿಲ್ಲ. ಸರಕಾರದ ಕ್ರಮ ಕಾನೂನುಬಾಹಿರವಾಗಿದೆ. 2020ರ ಅಕ್ಟೋಬರ್ 10ರಿಂದಲೂ ಸಿಬಿಐ ತನಿಖೆ ಅರ್ಜಿ ವಿಚಾರಣೆ ನಡೆಯುತ್ತಿದೆ. ಈಗಲೂ ತನಿಖೆ ಪ್ರಗತಿಯಲ್ಲಿದೆ,” ಎಂದರು.