ಕೋಲಾರ:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯವನ್ನು ಇಂದು ಆರಂಭಿಸಿದರು.
DCM ಡಿಕೆಶಿ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಇತಿಹಾಸ ಪ್ರಸಿದ್ಧ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ತಾಲ್ಲೂಕಿನ ಕುರುಡುಮಲೆ ದೇಗುಲದಲ್ಲಿ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ‘ಪ್ರಜಾಧ್ವನಿ-2’ ಯಾತ್ರೆ ಹಾಗೂ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ಲಭಿಸಿತು.
ಬಳಿಕ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೆಗೆ ತೆರಳಿದ ಡಿ.ಕೆ.ಶಿವಕುಮಾರ್, ಕುರುಡುಮಲೆ ಗಣೇಶ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಬಳಿಕ ಕೋಲಾರದಲ್ಲಿ ಜನಧ್ವನಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ಇಂದು ಕುರುಡುಮಲೆಗೆ ಭೇಟಿ ನೀಡಿ ವಿನಾಯಕನಿಗೆ ಪೂಜೆ ಸಲ್ಲಿಸಲಾಗಿದೆ.
ದರ್ಗಾಗೆ ಡಿಕೆಶಿ ಭೇಟಿ ಮುಳಬಾಗಿಲು ಪಟ್ಟಣದಲ್ಲಿರುವ ಪುರಾತನ ಇತಿಹಾಸ ಹೋದಿರುವ ಹೈದರ್ ಸಾಬ್ ದರ್ಗಾಕ್ಕೆ ಡಿಕೆಶಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಡಿಕೆಶಿ ಜೊತೆ ಸ್ಥಳೀಯ ಮುಖಂಡರು ಹಾಗೂ ರಾಜ್ಯ ನಾಯಕರು ಭಾಗಿಯಾಗಿದ್ದರು.