ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವು ಇಂದು ನಡೆಯುತ್ತಿದೆ.
ಟಾಸ್ ಗೆದ್ದ ರಾಜಸ್ಥಾನ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ದಿನೇಶ್ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಹೇಳಿಕೆ – ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು!
ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ಇಲ್ಲಿಯವರೆಗೆ ಉತ್ತಮ ಫಾರ್ಮ್ನಲ್ಲಿದೆ. ತಂಡವು 3 ಪಂದ್ಯಗಳನ್ನು ಆಡಿದ್ದು ಮೂರರಲ್ಲಿ ಗೆದ್ದಿದೆ. ರಾಜಸ್ಥಾನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 20 ರನ್, ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 12 ರನ್ ಹಾಗೂ ಮೂರನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 6 ರನ್ ಗೆಲುವು ಸಾಧಿಸಿದೆ. ಮತ್ತೊಂದೆಡೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಿತಿ ತುಂಬಾ ಕೆಟ್ಟದಾಗಿದೆ. ಈ ತಂಡ ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು ಒಂದರಲ್ಲಿ ಮಾತ್ರ ಗೆದ್ದಿದೆ. ಹೀಗಾಗಿ ಜೈಪುರದ ಮೈದಾನದಲ್ಲಿ ಇಂದು ಯಾವ ತಂಡ ಗೆಲ್ಲುತ್ತದೆ ಎಂಬುದು ಕುತೂಹಲ ಮೂಡಿಸಿದೆ.