ಐಪಿಎಲ್ನ 19ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಆರ್ಸಿಬಿ ಆರಂಭಿಕ ಆಟಗಾರ ವಿರಾಟ್ ಕೊಹ್ಲಿಗೆ ಈ ಲೀಗ್ನ ಚೊಚ್ಚಲ ಶತಕ ಬಾರಿಸಿದ್ದಾರೆ.
ಗೆಲ್ಲೇಲಬೇಕಾದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಬ್ಯಾಟಿಂಗ್ ಆರಂಭಿಸಿದ ಬೆಂಗಳೂರು ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಫಾಫ್ ಶತಕದ ಆರಂಭ ಒದಗಿಸಿದರು
ಕಾಲರಾ ನಿರ್ವಹಣೆ: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಸಭೆ ಕರೆಯುವಂತೆ ಎಎಪಿ ಆಗ್ರಹ
ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs RR) ನಡುವಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡುವ ಮತ್ತೊಮ್ಮೆ ಅಬ್ಬರಿಸಿ ಬೊಬ್ಬಿರಿದರು. ಈ ಮೂಲಕ ಐಪಿಎಲ್ 17ನೇ ಸೀಸನ್ ನಲ್ಲಿ 3ನೇ ಅರ್ಧಶತಕ ಸಿಡಿಸಿದರು.
ಇದಾದ ಬಳಿಕ ವಿರಾಟ್ ಕೊಹ್ಲಿ ಅಬ್ಬರ ಇನ್ನಷ್ಟು ಬಿರುಸಾಯಿತು. ಈ ಮೂಲಕ ರಾಜಸ್ಥಾನ್ ವಿರುದ್ಧ ಭರ್ಜರಿ ಶತಕವನ್ನೂ ಸಿಡಿಸಿದರು. ಈ ಮೂಲಕ ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ 8ನೇ ಶತಕ ಸಿಡಿಸಿ ಮಿಂಚಿದ್ದಾರೆ. ಅಲ್ಲದೇ ಐಪಿಎಲ್ 17ನೇ ಸೀಸನ್ನ ಮೊದಲ ಶತಕ ಸಹ ಇದೇ ಆಗಿದೆ. ಕೊಹ್ಲಿ ಆರ್ಆರ್ ವಿರುದ್ಧ 67 ಎಸೆತದಲ್ಲಿ 9 ಬೌಂಡರಿ ಮತ್ತು 4 ಸಿಕ್ಸ್ ಮೂಲಕ 100 ರನ್ ಗಳಿಸಿ ಅಬ್ಬರಿಸಿದರು.
ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಕೇವಲ 39 ಎಸೆತದಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದರು. ಈ ಮೂಲಕ ವಿರಾಟ್ ಕೊಹ್ಲಿ ಹೊಸ ದಾಖಲೆಯನ್ನೂ ನಿರ್ಮಿಸಿದರು. ವಿರಾಟ್ ಕೊಹ್ಲಿ ಈಗ ಐಪಿಎಲ್ನಲ್ಲಿ 7500 ರನ್ಗಳನ್ನು ತಲುಪಿದ್ದಾರೆ, ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಹೌದು, ವಿರಾಟ್ ಈ ಬೃಹತ್ ಮೈಲುಗಲ್ಲು ಕೇವಲ 34 ರನ್ಗಳ ಅಂತರದಲ್ಲಿದ್ದರು. ಈ ವೇಳೆ ರಾಜಸ್ಥಾನ್ ವಿರುದ್ಧ 7ನೇ ಓವರ್ನಲ್ಲಿಯೇ ಕೊಹ್ಲಿ ಈ ಸಾಧನೆಯನ್ನು ಪೂರ್ಣಗೊಳಿಸಿದರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಅಗ್ರಸ್ಥಾನಕ್ಕೇರಿದ್ದಾರೆ.