ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ದಿನದ ನಂತರ ರೀಲ್ಸ್ ರಾಣಿ ಸೋನು ಶ್ರೀನಿವಾಸಗೌಡ ಜೈಲಿನಿಂದ ಬಿಡುಗಡೆ ಆಗಿದ್ದಾರೆ.
IPL 2024: RR ವಿರುದ್ಧ ಕಿಂಗ್ ಆರ್ಭಟ: ಶತಕ ಸಿಡಿಸಿ ಮಿಂಚಿದ ವಿರಾಟ್ !
ಜಾಮೀನು ಷರತ್ತು ಪೂರೈಸಿದ ನಂತರ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಮೂರು ದಿನಗಳ ಹಿಂದೆ ಸೋನುಗೌಡಗೆ ಕೋರ್ಟ್ನಿಂದ ಜಾಮೀನು ಮಂಜೂರಾಗಿತ್ತು. ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ರೂ. ಬಾಂಡ್ ಷರತನ್ನು ನ್ಯಾಯಾಧೀಶರು ವಿಧಿಸಿದ್ದರು.
ಇಂದು ಜಾಮೀನು ಅರ್ಜಿಯ ಷರತ್ತುಗಳನ್ನ ಪೂರೈಸಿದ ಹಿನ್ನೆಲೆ 8:10 ರ ಸುಮಾರಿಗೆ ಜೈಲಿನಿಂದ ಬಿಡುಗಡೆ ಮಾಡಿದ್ದಾರೆ. ಇತ್ತ ಬಿಡುಗಡೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕುಟುಂಬಸ್ಥರು ಹಾಗೂ ಸ್ನೇಹಿತರೊಂದಿಗೆ ಸೋನು ಶ್ರೀನಿವಾಸಗೌಡ ತೆರಳಿದ್ದಾರೆ.