ಅಫ್ಘಾನಿಸ್ತಾನದಲ್ಲಿ ಇಂದು ಮುಂಜಾನೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭಾರತೀಯ ಕಾಲಮಾನ ಮುಂಜಾನೆ 2.26 ರ ಸುಮಾರಿಗೆ 120 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತ್ರೀವ್ರತೆಯ ಭೂಕಂಪ ಸಂಭವಿಸಿದೆ.
ಮುಂಜಾನೆ 2.47 ರ ಸುಮಾರಿಗೆ, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಪ್ರದೇಶದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ. ಕೆಲವು ದಿನಗಳ ಹಿಂದೆ ಮಾರ್ಚ್ 28 ರಂದು ಅಫ್ಘಾನಿಸ್ತಾನದಲ್ಲಿ ಇದೇ ರೀತಿಯ ಮತ್ತೊಂದು ಭೂಕಂಪ ಸಂಭವಿಸಿತ್ತು. ಭಾರತೀಯ ಕಾಲಮಾನ ಬೆಳಿಗ್ಗೆ 5.44 ರ ಸುಮಾರಿಗೆ 4.2 ತೀವ್ರತೆಯ ಭೂಕಂಪ ಸಂಭವಿಸಿದೆ.
ಇದಕ್ಕೂ ಮುನ್ನ ಜನವರಿಯಲ್ಲಿ ಅಫ್ಘಾನಿಸ್ತಾನದ ಬಳಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು ಮತ್ತು ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡುಕ ಉಂಟಾಗಿತ್ತು.