ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬರ, ಪ್ರಕೃತಿ ವಿಕೋಪಗಳನ್ನು ಎದುರಿಸಲು ಮುಂಚಿತವಾಗಿಯೇ ಎಸ್ಡಿಆರ್ಎಫ್ ಅಡಿ 697 ಕೋಟಿ ರೂ. ಕೊಡಲಾಗಿದೆ. ಅದರಲ್ಲೇ ಬರಕ್ಕೂ ಹಣ ವಿನಿಯೋಗ ಮಾಡಿಕೊಳ್ಳಬಹುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ನಿರ್ಮಲಾ ಸೀತಾರಾಮನ್, ಎಸ್ಡಿಆರ್ಎಫ್ ಅಡಿ 929.60 ಅನುದಾನ ಇದೆ. ಇದರಲ್ಲಿ 697 ಕೋಟಿ ಕೇಂದ್ರ ಪಾಲನ್ನು ಎರಡು ಕಂತುಗಳಲ್ಲಿ ಕೊಡಲಾಗಿದೆ. ಈ ಹಣ ಮುಂಚಿತವಾಗಿಯೇ ಬಿಡುಗಡೆ ಮಾಡಲಾಗಿದೆ. ಇದರಲ್ಲೇ ಬರ ಪರಿಹಾರಕ್ಕೂ ಅನುದಾನ ಬಳಸಿಕೊಳ್ಳಲು ಅವಕಾಶ ಇದೆ. ಕೇಂದ್ರದಿಂದ ಬರ ಪರಿಹಾರ ವಿಳಂಬವಾಗಿಲ್ಲ ಎಂದಿದ್ದಾರೆ.
PUC ಪಾಸಾದವರಿಗೆ ಉದ್ಯೋಗವಕಾಶ! ಪರೀಕ್ಷೆ ಇಲ್ಲದೆ ನೇರ ನೇಮಕಾತಿ – ತಿಂಗಳಿಗೆ ₹63,000 ಸಂಬಳ.!
ಬರಕ್ಕೆ ಕೇಂದ್ರ ಹಣ ಕೊಟ್ಟಿಲ್ಲ ಅನ್ನೋದು ತಪ್ಪು. ಸದ್ಯದಲ್ಲೇ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ ಬರ ಪರಿಹಾರ ಬಿಡುಗಡೆ ಮಾಡಲಿದೆ. ಈ ಸಭೆಯಲ್ಲಿ ತೀರ್ಮಾನವಾಗುವ ಬರ ಪರಿಹಾರ ಬಿಡುಗಡೆಗೆ ಕೇಂದ್ರ ಚುನಾವಣಾ ಆಯೋಗದ ಅನುಮತಿಯನ್ನೂ ಕೇಳಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ತೆರಿಗೆ ಹಂಚಿಕೆ ಕಳೆದ ಮಾರ್ಚ್ ವರೆಗೆ ಪೂರ್ಣ ಕೊಡಲಾಗಿದೆ. ನಾಲ್ಕು ಪಟ್ಟು ಹೆಚ್ಚು ಕೊಡಲಾಗಿದೆ. 15ನೇ ಹಣಕಾಸು ಆಯೋಗ ತನ್ನ ಮಧ್ಯಂತರ ವರದಿಯಲ್ಲಿ 5495 ಕೋಟಿ ವಿಶೇಷ ಅನುದಾನ ಕೊಡಬೇಕು ಅಂತ ಶಿಫಾರಸ್ಸು ಮಾಡಿದ್ದು ಹೌದು. ಆದರೆ ಅಂತಿಮ ವರದಿಯಲ್ಲಿ ಆ ಶಿಫಾರಸು ಇರಲಿಲ್ಲ. ಹಾಗಾಗಿ ಆ ವಿಶೇಷ ಅನುದಾನ ಕರ್ನಾಟಕಕಕ್ಕೆ ಕೊಡುವ ಪ್ರಶ್ನೆಯೇ ಬರಲ್ಲ ಎಂದು ಹೇಳಿದ್ದಾರೆ.