ಹ್ಯಾಟ್ರಿಕ್ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡಕ್ಕೆ ಕೊನೆಗೂ ಒಂದು ಗೆಲುವು ದೊರಕಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದರು. ಈ ಮೂಲಕ ಮುಂಬೈ ತಂಡವು 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 234 ರನ್ ಗಳಿಸಿದರು. ಮುಂಬೈ ಇಂಡಿಯನ್ಸ್ ಬ್ಯಾಟ್ಸ್ಮನ್ ರೊಮಾರಿಯೊ ಶೆಫರ್ಡ್ ಐಪಿಎಲ್ 20ನೇ ಪಂದ್ಯದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದರು. ಮುಂಬೈ ಇಂಡಿಯನ್ಸ್ನ ಕೊನೆಯ ಓವರ್ನಲ್ಲಿ ಶೆಫರ್ಡ್ ಒಟ್ಟು 32 ರನ್ ಗಳಿಸಿದರು. ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ ಗೆ 8 ವಿಕೆಟ್ ನಷ್ಟಕ್ಕೆ 205 ರನ್ ಗಳಿಸುವ ಮೂಲಕ 29 ರನ್ ಗಳಿಂದ ಸೋಲನ್ನಪ್ಪಿತು. ಈ ಮೂಲಕ ಮುಂಬೈ ಮೊದಲ ಗೆಲುವು ದಾಖಲಿಸಿತು.
ಇನ್ನು, ಮುಂಬೈ ಇಂಡಿಯನ್ಸ್ ನೀಡಿದ ಬೃಹತ್ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ತಂಡಕ್ಕೆ ಪೃಥ್ವಿ ಶಾ ಉತ್ತಮವಾಗಿ ಬ್ಯಾಟಿಂಗ್ ಮಾಡಿದರು. ಶಾ 40 ಎಸೆತದಲ್ಲಿ 8 ಫೋರ್ ಮತ್ತು 3 ಸಿಕ್ಸ್ ಮೂಲಕ 66 ರನ್ ಚಚ್ಚಿದರು. ಆದರೆ ಏಕಾಂಗಿಯಾಗಿ ಹೋರಾಟ ನಡೆಸಿದ ಟ್ರಿಸ್ಟನ್ ಸ್ಟಬ್ಸ್ 25 ಎಸೆತದಲ್ಲಿ 7 ಸಿಕ್ಸ್ ಮತ್ತು 3 ಬೌಂಡರಿ ಸಹಿತ 71 ರನ್ ಸಿಡಿಸಿದರೂ ಪಂದ್ಯವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಉಳಿದಂತೆ ಡೇವಿಡ್ ವಾರ್ನರ್ 10 ರನ್, ಅಭಿಷೇಕ್ ಪೋರಲ್ 41 ರನ್, ನಾಯಕ ರಿಷಭ್ ಪಂತ್ 1 ರನ್, ಅಕ್ಷರ್ ಪಟೇಲ್ 8 ರನ್, ಲಲಿತ್ ಯಾದವ್ 4 ರನ್ ಮತ್ತು ರಿಚರ್ಡ್ಸನ್ 2 ರನ್ ಗಳಿಸಿದರು.
ಮುಂಬೈ ಇಂಡಿಯನ್ಸ್ ಪರ ರೊಮಾರಿಯೊ ಶೆಫರ್ಡ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವೇಗದ ಬೌಲರ್ ಎನ್ರಿಕ್ ನಾರ್ಸಿಯಾ ಅವರ ಓವರ್ನಲ್ಲಿ ಬೌಂಡರಿ ಮತ್ತು ಸಿಕ್ಸರ್ಗಳ ಮಳೆ ಸುರಿಸಿದರು. ಶೆಫರ್ಡ್ ಅವರ ಆಕ್ರಮಣಕಾರಿ ಬ್ಯಾಟಿಂಗ್ನಿಂದಾಗಿ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟಿಂಗ್ ಮಾಡಿ 5 ವಿಕೆಟ್ಗೆ 234 ರನ್ ಗಳಿಸಿತು. ಇದು ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ನ ನಾಲ್ಕನೇ ಗರಿಷ್ಠ ಸ್ಕೋರ್ ಆಗಿದೆ. ರೊಮಾರಿಯೊ ಶೆಫರ್ಡ್ 10 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ಗಳ ನೆರವಿನಿಂದ ಅಜೇಯ 39 ರನ್ ಗಳಿಸಿದರು. ಇನ್ನು, ಮುಂಬೈ ಇಂಡಿಯನ್ಸ್ ಕೊನೆಯ 5 ಓವರ್ಗಳಲ್ಲಿ 96 ರನ್ ಗಳಿಸಿತು. ಶೆಫರ್ಡ್ ಎರಡನೇ, ಮೂರನೇ ಮತ್ತು ನಾಲ್ಕನೇ ಎಸೆತಗಳನ್ನು ಸಿಕ್ಸರ್ಗಳಿಗೆ ಬೌಂಡರಿ ದಾಟಿಸುವಾಗ ಅನ್ರಿಚ್ ನಾರ್ಟ್ಜೆ ಅವರ ಕೊನೆಯ ಓವರ್ನ ಮೊದಲ ಎಸೆತದಲ್ಲಿ ಬೌಂಡರಿ ಬಾರಿಸಿದರು.
ಮುಂಬೈ ಇಂಡಿಯನ್ಸ್ ಪರ ನಾಯಕ ರೋಹಿತ್ ಶರ್ಮಾ 49 ರನ್ ಗಳಿಸಿದರೆ, ಟಿಮ್ ಡೇವಿಡ್ 21 ಎಸೆತಗಳಲ್ಲಿ 45 ರನ್ ಗಳಿಸಿ ಅಜೇಯರಾಗಿ ಮರಳಿದರು. ವಿಕೆಟ್ ಕೀಪರ್ ಇಶಾನ್ ಕಿಶನ್ 23 ಎಸೆತಗಳಲ್ಲಿ 42 ರನ್ ಕೊಡುಗೆ ನೀಡಿದರೆ, ನಾಯಕ ಹಾರ್ದಿಕ್ ಪಾಂಡ್ಯ 39 ರನ್ ಗಳಿಸಿ ಔಟಾದರು. ಸುದೀರ್ಘ ಸಮಯದ ಬಳಿಕ ಗಾಯದಿಂದ ಚೇತರಿಸಿಕೊಂಡು ವಾಪಸಾದ ಸೂರ್ಯಕುಮಾರ್ ಕುಮಾರ್ ಯಾದವ್ 2 ಎಸೆತಗಳನ್ನು ಆಡಿ ಖಾತೆ ತೆರೆಯದೆ ಔಟಾದರು. ಈ ಮೂಲಕ ಗಾಯದ ನಂತರ ಕಣಕ್ಕಿಳಿದ ಸೂರ್ಯಕುಮಾರ್ ಮೇಲೆ ಮುಂಬೈ ತಂಡ ಹಾಗೂ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟಿದ್ದರು. ಆದರೆ ಸೂರ್ಯ ಶೂನ್ಯಕ್ಕೆ ಔಟ್ ಆಗಿ ನಿರಾಸೆ ಮೂಡಿಸಿದರು.