ಟಿ20 ಕ್ರಿಕೆಟ್ನಲ್ಲಿ ಹಿಟ್ಮ್ಯಾನ್ ರೋಹಿತ್ ಶರ್ಮಾ ನೂತನ ದಾಖಲೆ ನಿರ್ಮಿಸಿದ್ದಾರೆ.
ಇಂದು ನಡೆದ 17ನೇ ಆವೃತ್ತಿಯ ಐಪಿಎಲ್ನ 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 29 ರನ್ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್ ತಂಡ ಲೀಗ್ನಲ್ಲಿ ಮೊದಲ ಜಯ ದಾಖಲಿಸಿದೆ.
ಈ ಪಂದ್ಯದಲ್ಲಿ ಮುಂಬೈ ಪರ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ರೋಹಿತ್ ಶರ್ಮಾ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಹಿತ 49 ರನ್ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಅತಿ ಅಪರೂಪದ ದಾಖಲೆಯನ್ನು ನಿರ್ಮಿಸಿದರು.
ರೋಹಿತ್ ಶರ್ಮಾ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಒಟ್ಟು 9 ಬೌಂಡರಿಗಳನ್ನು ಬಾರಿಸುವುದರೊಂದಿಗೆ ಟಿ20 ಕ್ರಿಕೆಟ್ನಲ್ಲಿ 1508 ಬೌಂಡರಿಗಳನ್ನು ಪೂರೈಸಿದ್ದಾರೆ. ಈ ಮೂಲಕ ರೋಹಿತ್ ಈ ಸ್ವರೂಪದಲ್ಲಿ 1500 ಕ್ಕೂ ಹೆಚ್ಚು ಬೌಂಡರಿಗಳನ್ನು ಬಾರಿಸಿದ ದಾಖಲೆಯನ್ನು ಹೊಂದಿರುವ ಮೊದಲ ಭಾರತೀಯ ಆಟಗಾರರಾಗಿದ್ದಾರೆ.
ರೋಹಿತ್ ನಂತರ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತೀಯ ಆಟಗಾರರ ಪೈಕಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಲ್ಲಿ ಇದುವರೆಗೆ ಒಟ್ಟು 1486 ಬೌಂಡರಿಗಳನ್ನು ಬಾರಿಸಿದ್ದಾರೆ.