ಮೊದಲ ಗೆಲುವಿನ ಬಳಿಕ ಪಾಯಿಂಟ್ಸ್ ಪಟ್ಟಿಯಲ್ಲಿ ಮುಂಬೈ ತಂಡ ಮೇಲೇರಿದ್ದು, ಡೆಲ್ಲಿ ಕೊನೆ ಸ್ಥಾನದಲ್ಲಿದೆ.
IPL ಸೀಸನ್ 17 ರ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ…
ಯುಗಾದಿ ಹಬ್ಬಕ್ಕೆ ಸ್ಪೆಷಲ್ ಮಾವಿನ ಚಿತ್ರಾನ್ನ ಟ್ರೈ ಮಾಡಿ – ರೆಸಿಪಿ ಇಲ್ಲಿದೆ!
ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ರಾಜಸ್ಥಾನ್ ರಾಯಲ್ಸ್ ತಂಡವು ಇದುವರೆಗೆ 4 ಪಂದ್ಯಗಳನ್ನಾಡಿದ್ದು, 4 ಮ್ಯಾಚ್ನಲ್ಲೂ ಜಯ ಸಾಧಿಸಿದೆ
ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟು 6 ಅಂಕಗಳನ್ನು ಸಂಪಾದಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.
ಇನ್ನು ನಾಲ್ಕು ಪಂದ್ಯಗಳಲ್ಲಿ 2 ಜಯ ಹಾಗೂ 2 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಲ್ಕನೇ ಸ್ಥಾನದಲ್ಲಿದೆ.
ಸನ್ರೈಸರ್ಸ್ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ 2 ಜಯ ಸಾಧಿಸಿದ್ದು, ಇದೀಗ 4 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಪಂಜಾಬ್ ಕಿಂಗ್ಸ್ ತಂಡವು 6ನೇ ಸ್ಥಾನದಲ್ಲಿದ್ದು, ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ
ಆಡಿರುವ ನಾಲ್ಕು ಮ್ಯಾಚ್ಗಳಲ್ಲಿ 2 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 4 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ.
ಮುಂಬೈ ಇಂಡಿಯನ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳಲ್ಲಿ 2 ಅಂಕ ಸಂಪಾದಿಸಿರುವ ಮುಂಬೈ ಇಂಡಿಯನ್ಸ್ ಇದೀಗ -0.704 ನೆಟ್ ರನ್ ರೇಟ್ನೊಂದಿಗೆ 8ನೇ ಸ್ಥಾನಕ್ಕೇರಿದೆ.
ಆರ್ಸಿಬಿ ತಂಡವು ಇದುವರೆಗೆ 5 ಪಂದ್ಯಗಳನ್ನಾಡಿದ್ದು, ಇದರಲ್ಲಿ 4 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ.
ಐದು ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -1.370 ನೆಟ್ ರನ್ ರೇಟ್ನೊಂದಿಗೆ 2 ಅಂಕ ಪಡೆದುಕೊಂಡಿದೆ