ಕಾರವಾರ:- ಪಕ್ಷದ ಪ್ರಚಾರಕ್ಕೂ ಬಾರದೇ ಇತ್ತ ಪಕ್ಷವನ್ನೂ ಬಿಡದ ಹೆಬ್ಬಾರ್ ಸ್ವ-ಪಕ್ಷದ ವಿರುದ್ಧವೇ ತೊಡೆತಟ್ಟಿದ್ದಾರೆ.
ಅಧಿಕಾರಕ್ಕಾಗಿ ಅಂದಿನ ಕಾಂಗ್ರೆಸ್ ಸರ್ಕಾರವನ್ನೇ ಬೀಳಿಸಿ ಬಂಡಾಯವೆದ್ದಿದ್ದ ಬಾಂಬೆ ಬಾಯ್ಸ್ಗಳಲ್ಲಿ ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಕೂಡ ಒಬ್ಬರು. ಬಿಜೆಪಿ ಹೆಸರಿನಲ್ಲಿ ಗೆದ್ದ ಯಲ್ಲಾಪುರ ಶಾಸಕ ಮತ್ತೊಮ್ಮೆ ರೆಬೆಲ್ ಆಗಿದ್ದಾರೆ.
Karnataka Weather: ಇಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!
ಇನ್ನು ಬಿಜೆಪಿಯಲ್ಲೇ ಇದ್ದು ಕಾಂಗ್ರೆಸ್ ಪರ ಪ್ರಚಾರಕ್ಕಿಳಿದಿರುವ ಹೆಬ್ಬಾರ್ ನಡೆಗೆ ಪಕ್ಷದಲ್ಲಿ ಅಸಮಾಧಾನ ಹೆಚ್ಚಿಸಿದೆ. ಇದೇ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರು ಹೆಬ್ಬಾರ್ ವಿರುದ್ಧ ಕಿಡಿಕಾರಿದ್ದಾರೆ.
ಹೆಬ್ಬಾರ್ ವಿರುದ್ಧ ಬಿಜೆಪಿ ಕ್ರಮಕೈಗೊಂಡಲ್ಲಿ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಗೆ (BJP) ಹಿನ್ನಡೆಯಾಗುವ ಆತಂಕವಿದೆ. ಅವರಾಗಿಯೇ ಪಕ್ಷ ತೊರೆದರೆ ಬಿಜೆಪಿಗೆ ಲಾಭ ಹೆಚ್ಚು. ಹೀಗಾಗಿ ಬಿಜೆಪಿಯಿಂದ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ಜಿಲ್ಲೆಯಲ್ಲಿ ಬಿಜೆಪಿ ನಾಯಕರಲ್ಲೂ ಅಸಮಾಧಾನಗಳಿದ್ದು, ಒಂದು ವಾರದಲ್ಲೇ ಸರಿ ಮಾಡುತ್ತೇವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದ್ದಾರೆ.