ಅಮೇರಿಕಾ:- 2023ರಲ್ಲಿ ನಾಪತ್ತೆಯಾಗಿದ್ದ ಭಾರತ ಮೂಲದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾರೆ. ಅಮೆರಿಕದ ಓಹಿಯೋ ನಗರದಲ್ಲಿ ಘಟನೆ ಜರುಗಿದೆ. ಕ್ಲೀವ್ಲ್ಯಾಂಡ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿಗಾಗಿ 2023 ರಲ್ಲಿ ಯುಎಸ್ಗೆ ತೆರಳಿದ್ದ ಹೈದರಾಬಾದ್ನ 25 ವರ್ಷದ ವಿದ್ಯಾರ್ಥಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಳಿ ಗನ್ ತಂದಿದ್ದ ವ್ಯಕ್ತಿ!.. ಆತನನ್ನು ನಾವೇ ಕರೆದದ್ದು ಎಂದ RV ದೇವರಾಜ್!
ಮೊಹಮ್ಮದ್ ಅಬ್ದುಲ್ ಅರ್ಫಾತ್ ಸುಮಾರು ಮೂರು ವಾರಗಳಿಂದ ನಾಪತ್ತೆಯಾಗಿದ್ದರು ಮತ್ತು ದೂತಾವಾಸವು ಅಬ್ದುಲ್ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಅವರನ್ನು ಪತ್ತೆಹಚ್ಚಲು ಸ್ಥಳೀಯ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ಈ ಹಿಂದೆ ತಿಳಿಸಿತ್ತು. ಇಂದು ಬೆಳಗ್ಗೆ ಅವರು ಶವವಾಗಿ ಪತ್ತೆಯಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.
ಕಳೆದ ಮಾರ್ಚ್ 7 ರಂದು ಕುಟುಂಬದವರೊಂದಿಗೆ ಮಾತನಾಡಿದ್ದರು, ನಂತರ ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು ಎಂದು ಅರ್ಫಾತ್ ತಂದೆ ತಿಳಿಸಿದ್ದಾರೆ. ಅಪರಿಚಿತ ಸಂಖ್ಯೆಯಿಂದ ಕರೆ ಬಂದಿತ್ತು ಬಳಿಕ ಮಗನನ್ನು ಅಪಹರಿಸಿದ್ದೇವೆ ಹಣ ಕೊಡಿ ಎಂದು ಬೇಡಿಕೆ ಇಟ್ಟಿದ್ದಾಗಿ ಹೇಳಿದ್ದಾರೆ.
ಅಬ್ದುಲ್ ಈ ವರ್ಷ ಅಮೇರಿಕಾದಲ್ಲಿ ಸಾವನ್ನಪ್ಪಿದ ಹನ್ನೊಂದನೇ ಭಾರತೀಯ. ಅವರಲ್ಲಿ ಎಂಟು ಮಂದಿ ವಿದ್ಯಾರ್ಥಿಗಳು. ಅಮೆರಿಕದಲ್ಲಿರುವ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬವನ್ನು ಈ ಘಟನೆಗಳು ಆತಂಕಕ್ಕೀಡು ಮಾಡಿವೆ.