ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 23ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಚಂಡೀಗಢದ ಮಹಾರಾಜ ಯದವೀಂದ್ರ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಬೌಲಿಂಗ್ ಆಯ್ದುಕೊಂಡಿದ್ದರು.
PUC ಮತ್ತು SSLC ಪಾಸಾದವರಿಗೆ ನವೋದಯ ವಿದ್ಯಾಲಯದಲ್ಲಿ ಭರ್ಜರಿ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿಕೊಂಡಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ನಿತೀಶ್ ರೆಡ್ಡಿ ಬೀರುಸಿನ ಬ್ಯಾಟಿಂಗ್ ಮಾಡುವ ಮೂಲಕ ಪಂಜಾಬ್ ಕಿಂಗ್ಸ್ ಎದುರು 182 ರನ್ಗಳನ್ನು ಕಲೆ ಹಾಕಲಾಗಿದೆ. ಈ ಪಂದ್ಯವನ್ನು ಪಂಜಾಬ್ ಕಿಂಗ್ಸ್ ಗೆಲ್ಲಲು 183 ರನ್ಗಳ ಅವಶ್ಯಕತೆ ಇದೆ. ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 183 ಟಾರ್ಗೆಟ್ ಅನ್ನು ಎಸ್ಆರ್ಹೆಚ್ ಪೇರಿಸಿದೆ.
ತಂಡಗಳು : ಸನ್ರೈಸರ್ಸ್ ಹೈದರಾಬಾದ್ : ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿ.ಕೀ), ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್
ಪಂಜಾಬ್ ಕಿಂಗ್ಸ್ : ಶಿಖರ್ ಧವನ್ (ನಾಯಕ), ಜಾನಿ ಬೈರ್ಸ್ಟೋವ್, ಜಿತೇಶ್ ಶರ್ಮಾ (ವಿ.ಕೀ), ಅಶುತೋಷ್ ಶರ್ಮಾ, ಸ್ಯಾಮ್ ಕರ್ರಾನ್, ಶಶಾಂಕ್ ಸಿಂಗ್, ಸಿಕಂದರ್ ರಜಾ, ಹರ್ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅರ್ಷದೀಪ್ ಸಿಂಗ್