ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ ಬಳಕೆಯ ಎಲ್ಲಾ ವಸ್ತುಗಳ ಮೇಲೆ ಕ್ರಮೇಣ ಇದರ ಪರಿಣಾಮ ಬೀರುತ್ತದೆ. ಸರಕುಗಳ ಸಾಗಣೆಗೆ ಪೆಟ್ರೋಲ್ ಡಿಸೇಲ್ ಅಗತ್ಯವಾಗಿರುವುದರಿಂದ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹೀಗಾಗಿ ಪ್ರತಿದಿನ ಎಲ್ಲರೂ ಪೆಟ್ರೋಲ್ ಡಿಸೇಲ್ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಕೆಲ ತಿಂಗಳಿಂದ ಬ್ರೇಕ್ ಬಿದ್ದಿದೆ.
ಕಾಫಿ ಪ್ರಿಯರಿಗೆ ಗುಡ್ ನ್ಯೂಸ್..! ಪ್ರತಿದಿನ 3 ಕಪ್ ಫಿಲ್ಟರ್ ಕಾಫಿ ಕುಡಿದರೆ ಡಯಾಬಿಟಿಸ್ ಕಂಟ್ರೋಲ್
ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡು ಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ರಾಜ್ಯದಲ್ಲೂ ಸಹ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಇತರೆಡೆ ಪ್ರತಿದಿನ ಪೆಟ್ರೋಲ್ (Petrol rate), ಡೀಸೆಲ್ ಬೆಲೆಯಲ್ಲಿ (diesel rate)ವ್ಯತ್ಯಾಸವಾಗುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಹಾಗೂ ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ ನೋಡಿ.
ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.62 ರೂ. ಮುಂಬೈನಲ್ಲಿ ಪೆಟ್ರೋಲ್ ಬೆಲೆ 104.21 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.15 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 103.94 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 90.76 ರೂ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 100.75 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 92.34 ರೂ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 99.84 ರೂ ಮತ್ತು ಡೀಸೆಲ್ 85.93 ರೂ.ಗೆ ಮಾರಾಟವಾಗುತ್ತಿದೆ. ಲಕ್ನೋದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.65 ರೂ
ಮತ್ತು ಡೀಸೆಲ್ 87.76 ರೂ.ಗೆ ಮಾರಾಟವಾಗುತ್ತಿದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.83 ರೂ ಮತ್ತು ಡೀಸೆಲ್ 87.96 ರೂ.ಗೆ ಮಾರಾಟವಾಗುತ್ತಿದೆ. ಗುರುಗ್ರಾಮದಲ್ಲಿ ಪ್ರತಿ ಲೀಟರ್ಗೆ ಪೆಟ್ರೋಲ್ 95.19 ಮತ್ತು ಡೀಸೆಲ್ 88.05 ರೂ.ಗೆ ಮಾರಾಟವಾಗುತ್ತಿದೆ. ಚಂಡೀಗಢದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.24 ರೂ ಮತ್ತು ಡೀಸೆಲ್ 82.40 ರೂ.ಗೆ ಮಾರಾಟವಾಗುತ್ತಿದೆ. ಪಾಟ್ನಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 105.18 ಮತ್ತು ಡೀಸೆಲ್ 92.04 ರೂ.ಗೆ ಮಾರಾಟವಾಗುತ್ತಿದೆ.
ಹೊಸ ಬೆಲೆಗಳು ಯಾವುವು? ನವದೆಹಲಿಯಲ್ಲಿ ಇತ್ತೀಚಿನ ಪೆಟ್ರೋಲ್ ಬೆಲೆ 96.72 ರಿಂದ 94.72 ಕ್ಕೆ ಇಳಿದಿದೆ. ಮುಂಬೈನಲ್ಲಿ 106.31 ರೂ.ಗೆ ಬದಲಾಗಿ 104.21 ರೂ., ಕೋಲ್ಕತ್ತಾದಲ್ಲಿ 106.03 ರೂ. ಬದಲಿಗೆ 103.94 ರೂ. ಮತ್ತು ಚೆನ್ನೈನಲ್ಲಿ 102.63 ರೂ. ರ ಬದಲು 100.75 ರೂ. ಆಗಿದೆ.
ದೆಹಲಿಯಲ್ಲಿ ಇತ್ತೀಚಿನ ಬೆಲೆ 89.62 ರೂ. ರ ಬದಲಿಗೆ 87.62 ರೂ. ಆಗಿರುತ್ತದೆ. ಅದೇ ಸಮಯದಲ್ಲಿ, ಮುಂಬೈನಲ್ಲಿ ಇತ್ತೀಚಿನ ಬೆಲೆ 94.27 ರೂ. ಬದಲು 92.15 ರೂ. ಆಗಿದೆ. ಕೋಲ್ಕತ್ತಾದಲ್ಲಿ 92.76 ರೂ. ಬದಲು 90.76 ರೂ. ಮತ್ತು ಚೆನ್ನೈನಲ್ಲಿ 94.24 ರೂ. ರ ಬದಲು 92.32 ರೂ. ಆಗಿದೆ.