ಬೆಂಗಳೂರು:- ಏಪ್ರಿಲ್14 ರಂದು ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಮಂಗಳೂರು ಬದಲು ಮೈಸೂರಿನಲ್ಲಿ ಆಯೋಜಿಸಲಾಗಿದೆ.
ಪ್ರಧಾನಿ ಮೋದಿಯವರ ಅವರ ಕರ್ನಾಟಕ ಭೇಟಿ ಕಾರ್ಯಕ್ರಮದಲ್ಲಿ ಮತ್ತೆ ಮಹತ್ವದ ಬದಲಾವಣೆಯಾಗಿದೆ. ಹಳೇಮೈಸೂರು ಭಾಗದಲ್ಲಿ ಸಿದ್ದರಾಮಯ್ಯ ಟಾರ್ಗೆಟ್ ಮಾಡಿರುವ ದೋಸ್ತಿಗಳು ಮೈಸೂರಿಗೆ ಮೋದಿ ಅವರನ್ನು ಕರೆಸಿ ಬೃಹತ್ ಸಮಾವೇಶ ನಡೆಸಲು ಮುಂದಾಗಿದ್ದಾರೆ
ಮೋದಿಯವರು ಏಪ್ರಿಲ್ 14 ರಂದು ಮೈಸೂರಿಗೆ ಸಂಜೆ 4 ಗಂಟೆಗೆ ಬರಲಿದ್ದಾರೆ. ಅಂದು ಮಹಾರಾಜ ಮೈದಾನದಲ್ಲಿ ಆಯೋಜನೆಗೊಂಡಿರುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ಮಾತಾಡಲಿದ್ದಾರೆ. ಹಳೇ ಮೈಸೂರಿನ ನಾಲ್ಕು ಲೋಕಕ್ಷೇತ್ರಗಳನ್ನು ಟಾರ್ಗೆಟ್ ಇಟ್ಟುಕೊಂಡು ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಿ ಯಶಸ್ವಿ ಮಾಡಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ.
ಅಂದು ಸಂಜೆ 6 ಗಂಟೆಗೆ ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರಿನ ನಾರಾಯಣ ಗುರು ಸರ್ಕಲ್ ನಿಂದ ನವಭಾರತ ವೃತ್ತದವರೆಗೆ 1.5 ಕಿ.ಮೀ ವರೆಗೆ ಮೋದಿಯವರು ರೋಡ್ ಶೋ ನಡೆಸಲಿದ್ದಾರೆ