ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಉಳಿದಿರುವ, ವಿರಾಟ್ ಕೊಹ್ಲಿ ಮತ್ತು ಆರ್ಸಿಬಿ ತಂಡ ಐಪಿಎಲ್ ಟ್ರೋಫಿ ಗೆಲ್ಲುತ್ತಾರೆಯೇ? ಎಂಬುದು. ಇದಕ್ಕೆ ಕೂಡ ಎಐ ಬಳಿ ಉತ್ತರವಿದೆ.
ಆರ್ಸಿಬಿ ತಂಡ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು 2029ರಲ್ಲಿ ಗೆಲ್ಲಲಿದೆ. ಅಂದರೆ, ಆರ್ಸಿಬಿ ತನ್ನ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿಯಲು ಇನ್ನೂ ಐದು ವರ್ಷಗಳ ಕಾಲ ಕಾಯಬೇಕಿದೆ. ಅಲ್ಲಿಯವರೆಗೂ ಆರ್ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಆಡುತ್ತಾರೆಯೇ? ಎಂಬ ಪ್ರಶ್ನೆಗೆ ಉತ್ತರಿಸುವುದು ಕಷ್ಟ ಎಂದು ಹೇಳಿದೆ.
2008ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಾರಂಭವಾದಾಗಿನಿಂದ, ಪಂದ್ಯಾವಳಿಯ ಭಾಗವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಕಳೆದ 16 ವರ್ಷಗಳಲ್ಲಿ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಮೂರು ಬಾರಿ (2009, 2011, 2016) ಫೈನಲ್ ಪ್ರವೇಶಿಸಿದ್ದರೂ, ಪ್ರಶಸ್ತಿ ಗೆಲುವು ಕನಸಾಗಿಯೇ ಉಳಿದಿದೆ.
ಇನ್ನು 2024ರ ಐಪಿಎಲ್ ಆವೃತ್ತಿಯಲ್ಲಿ ಈಗಾಗಲೇ ಹೆಣಗಾಡುತ್ತಿರುವ ಆರ್ಸಿಬಿ ತಂಡಕ್ಕೆ ಮುಂದಿನ ಐದು ವರ್ಷಗಳು ಕೂಡ ನಿರಾಸೆಯಿಂದ ಕೂಡಿರಲಿವೆ ಎಂದು ಕೃತಕ ಬುದ್ಧಿಮತ್ತೆ (AI) ತಿಳಿಸಿದೆ. ಆದರೆ, ಈ ಭವಿಷ್ಯ ಎಷ್ಟರ ಮಟ್ಟಿಗೆ ನಿಜವಾಗುತ್ತದೆ ಎಂಬುದಕ್ಕೆ ಕಾಲವೇ ಉತ್ತರ ನೀಡಬೇಕಿದೆ.
ಈ ವರ್ಷ ಆರ್ಸಿಬಿ ತಂಡ ಆಡಿದ 5 ಪಂದ್ಯಗಳಲ್ಲಿ 4 ಪಂದ್ಯಗಳಲ್ಲಿ ಸೋತಿದೆ ಮತ್ತು ಕೇವಲ 1 ಪಂದ್ಯದಲ್ಲಿ ಮಾತ್ರ ಗೆಲುವು ಸಾಧಿಸಿದೆ. 2024ರ ಐಪಿಎಲ್ ಅಂಕಪಟ್ಟಿಯಲ್ಲಿ ಸದ್ಯ 9ನೇ ಸ್ಥಾನದಲ್ಲಿ ಸೊರಗುತ್ತಿದೆ.
ಆರ್ಸಿಬಿ ತಂಡದ ಬ್ಯಾಟರ್ಗಳು ಮತ್ತು ಬೌಲರ್ಗಳು ಉತ್ತಮ ಪ್ರದರ್ಶನ ನೀಡಲು ವಿಫಲರಾಗಿದ್ದಾರೆ ಮತ್ತು ಇದು ತಂಡಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ.