ಬೆಂಗಳೂರು: ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಸೋಲಿನ ಹತಾಶೆಯಿಂದ ಗೂಂಡಾಗಿರಿ ನಡೆಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ನವೀನ್ ಅವರ ಫೋಟೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಆರ್. ಅಶೋಕ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ ಸಿಎಂ ಇನ್ ವೈಟಿಂಗ್ ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ ಡಿಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿಕೆ ಸುರೇಶ್ ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ಬಿಜೆಪಿ ಕಾರ್ಯಕರ್ತ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ ಸಿದ್ದರಾಮಯ್ಯನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.