ಬಾಲಿವುಡ್ ನಟಿ ಅಂಕಿತಾ ಲೋಖಂಡೆ ಬಿಗ್ ಬಾಸ್ ಮನೆಗೆ ಹೋಗಿ ಬಂದ ಬಳಿಕ ಬೇಡಿಕೆ ಹೆಚ್ಚಾಗಿದೆ. ಜೋಡಿಯಾಗಿ ದೊಡ್ಮನೆಗೆ ಹೋಗಿ ಬಂದ ಅಂಕಿತಾ ಹಾಗೂ ವಿಕ್ಕಿ ಜೈನ್ಗೆ ಅಪಾರ ಅಭಿಮಾನಿಗಳಿದ್ದಾರೆ. ಸದ್ಯ ಮದುವೆಯಾಗಿ 6 ವರ್ಷ ಪೂರೈಸಿದ ಖುಷಿಯಲ್ಲಿರುವ ಅಂಕಿತಾ ದಂಪತಿ ಬೆಡ್ರೂಮ್ ಫೋಟೋ ಶೇರ್ ಮಾಡಿದ್ದಾರೆ.
ಅಂಕಿತಾ ಮತ್ತು ವಿಕ್ಕಿ ಜೈನ್ ಇತ್ತೀಚೆಗೆ ತಮ್ಮ 6ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ್ದಾರೆ. ತಮ್ಮ ಮದುವೆಯ ದಿನವನ್ನು ಕೇಕ್ ಕತ್ತರಿಸಿ ವಿಶೇಷವಾಗಿ ಸೆಲೆಬ್ರೇಟ್ ಮಾಡಿರುವ ಜೋಡಿ ವೈಟ್ ಡ್ರೆಸ್ನಲ್ಲಿ ಮಿಂಚಿದ್ದಾರೆ. ಮೊದಲ ರಾತ್ರಿಗೆ ಬೆಡ್ ಸಿಂಗಾರ ಮಾಡುವ ಹಾಗೆಯೇ ಈಗಲೂ ಮಾಡಿದ್ದಾರೆ. ಇಬ್ಬರೂ ಖುಷಿಯಿಂದ ಕುಳಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
ಈ ವರ್ಷದ ಬಿಗ್ ಬಾಸ್ ಸೀಸನ್ 17ರಲ್ಲಿ ವಿಕ್ಕಿ ಜೈನ್ ಅವರು ಅಂಕಿತಾ ಲೋಖಂಡೆ ಜೊತೆ ಜೋಡಿಯಾಗಿ ಎಂಟ್ರಿ ಕೊಟ್ಟಿದ್ದರು. ಮನೆ ಜಗಳ ಬಿಗ್ ಬಾಸ್ ಮನೆಯಲ್ಲೂ ತಾರಕಕ್ಕೇರಿತ್ತು. ಇಬ್ಬರ ಜಗಳ ದೊಡ್ಮನೆಯಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈಗ ಮುನಿಸು ಮರೆತು ಇಬ್ಬರೂ ಒಂದಾಗಿದ್ದಾರೆ. ಬಿಗ್ ಬಾಸ್ ಶೋ ಮುಗಿದ ಮೇಲೆ ಅಂಕಿತಾಗೆ ಬಾಲಿವುಡ್ ಸಿನಿಮಾಗಳಿಂದ ಸಾಕಷ್ಟು ಆಫರ್ ಗಳು ಬರೋಕೆ ಶುರುವಾಗಿದೆ.