ಬೆಂಗಳೂರು:– ತಮಿಳುನಾಡಿನ ಕಿಲ್ಪೆನ್ನತುರ್ ಠಾಣಾ ವ್ಯಾಪ್ತಿಯ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಐವರು ಪೊಲೀಸ್ ಅಧಿಕಾರಿಗಳು ಹೋಗುತ್ತಿದ್ದ ಜೀಪ್ ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ.
ಕರ್ನಾಟಕದ ಅಧಿಕಾರಿ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಕರ್ನಾಟಕದಿಂದ ಎಲೆಕ್ಷನ್ ಡ್ಯೂಟಿಗೆ ಹೋಗಿದ್ದ ಪೊಲೀಸ್ ಅಧಿಕಾರಿ, KSRP ಅಸಿಸ್ಟೆಂಟ್ ಕಮಾಂಡೆಂಟ್ ಪ್ರಭಾಕರ್ ಹಾಗೂ ತಮಿಳುನಾಡು ಕಾನ್ಸ್ಟೇಬಲ್ ದಿನೇಶ್ ಮೃತಪಟ್ಟಿದ್ದಾರೆ.
ಸಂಜೆ ನಾಲ್ಕು ಗಂಟೆ ಸುಮಾರಿಗೆ ತಿರುವಣ್ಣಾಮಲೈ- ದಿಂಡಿವನಂ ಹೈವೇಯಲ್ಲಿ ಅಪಘಾತ ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಸದ್ಯ ಇಬ್ಬರ ಮೃತದೇಹಗಳನ್ನು ತಮಿಳುನಾಡಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ