ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಪಂದ್ಯದಲ್ಲಿ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರು ದಾಖಲೆ ಬರೆದಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 25ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್ಸಿಬಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು
IPL 2024: ಈತನನ್ನು ಹೊರಗಿಡದೆ ನಿಮ್ಮ ಗೆಲುವು ಅಸಾಧ್ಯ! – ಆರ್ಸಿಬಿಗೆ ಸಲಹೆ ಕೊಟ್ಟ ಭಜ್ಜಿ!
197 ರನ್ಗಳ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ ರೋಹಿತ್ ಶರ್ಮಾ 24 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 38 ರನ್ ಬಾರಿಸಿದ್ದರು. ಈ ಮೂರು ಸಿಕ್ಸರ್ಗಳೊಂದಿಗೆ ವಾಂಖೆಡೆ ಸ್ಟೇಡಿಯಂನಲ್ಲಿ 100 ಸಿಕ್ಸ್ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು.
ಅಲ್ಲದೆ ಒಂದೇ ಸ್ಟೇಡಿಯಂನಲ್ಲಿ 100 ಸಿಕ್ಸ್ಗಳನ್ನು ಸಿಡಿಸಿದ 2ನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ ಇಂತಹದೊಂದು ಅಪರೂಪದ ದಾಖಲೆಯನ್ನು ವಿರಾಟ್ ಕೊಹ್ಲಿ ಬರೆದಿದ್ದಾರೆ.
ಕಿಂಗ್ ಕೊಹ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೆ 114 ಸಿಕ್ಸ್ಗಳನ್ನು ಬಾರಿಸಿದ್ದಾರೆ. ಈ ಮೂಲಕ ಒಂದೇ ಸ್ಟೇಡಿಯಂನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.
ರೋಹಿತ್ ಶರ್ಮಾ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 100 ಸಿಕ್ಸ್ಗಳನ್ನು ಪೂರೈಸಿದ್ದಾರೆ. ಅಲ್ಲದೆ ಮುಂಬರುವ ಪಂದ್ಯಗಳಲ್ಲಿ 3 ಸಿಕ್ಸ್ಗಳನ್ನು ಬಾರಿಸಿದರೆ ಟಿ20 ಕ್ರಿಕೆಟ್ನಲ್ಲಿ 500 ಸಿಕ್ಸರ್ಗಳನ್ನು ಸಿಡಿಸಿದ ಮೊದಲ ಭಾರತೀಯ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.