ಗದಗ:- ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಾಣಾಳಿಕೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಕಾವೇರಿ ವಿಷಯ ಪ್ರಸ್ತಾಪಿಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ದೇವೇಗೌಡರು!
ಗದಗ ನಗರದಲ್ಲಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮದು ಬಡವರಿಗೆ ಬದುಕು ಕಟ್ಟಿಕೊಡುವ ಪ್ರಣಾಳಿಕೆ ಶಾಶ್ವತವಾಗಿ ದೇಶವನ್ನು ಕಟ್ಟುವಂತದ್ದು ಮತ್ತು ಬಡತನ ನಿರ್ಮೂಲನೆ ಮಾಡುವುದೇ ನಮ್ಮ ಗುರಿ ಎಂದರು. ಕಳೆದ ಹತ್ತು ವರ್ಷದಲ್ಲಿ ಈಗಾಗಲೇ 15 ಕೋಟಿ ಜನರ ಬಡತನ ನಿರ್ಮೂಲನೆಯಾಗಿದೆ. ಇನ್ನೂ 25 ಕೋಟಿ ಜನ ಬಡತನ ನಿರ್ಮೂಲನೆ ಮಾಡುವ ಗುರಿ ನಮ್ಮ ಪ್ರಣಾಳಿಕೆಯಲ್ಲಿದೆ. ಮೂಲಭೂತ ಸೌಕರ್ಯ, ಮನೆ, ಶೌಚಾಲಯ, ಶಾಶ್ವತವಾಗಿ ಕೊಡುತ್ತೇವೆ ಎಂದರು.
ವಿಶೇಷವಾಗಿ ಸೂರ್ಯ ಘರ್ ಯೋಜನೆ ಅಡಿ ಸೋಲಾರ್ ಎನರ್ಜಿಯಿಂದ ಉಚಿತ ವಿದ್ಯುತ್ ಪಡೆದು, ವಿದ್ಯುತ್ ಉತ್ಪಾದನೆ ಮಾಡಿ ಮಾರಾಟ ಮಾಡಬಹುದು. ರೈತರಿಗೆ ಅನುಕೂಲವಾಗುವಂತ ಯೋಜನೆ ಮುಂದುವರೆಸಲಾಗಿದೆ. ಹೆಣ್ಣು ಮಕ್ಕಳಿಗೆ ಲಕ್ಷ ಪತಿ ದೀದಿ ಯೋಜನೆಯಿದೆ. ಅದನ್ನು 3 ಕೋಟಿ ಮಹಿಳೆಯರಿಗೆ ವಿಸ್ತರಿಸಲು ಭರವಸೆ ನೀಡಲಾಗಿದೆ. ಇದರಿಂದ ಹೆಣ್ಣು ಮಕ್ಕಳ ಸಬಲೀಕರಣವಾಗುತ್ತದೆ ಎಂದರು.
ಬಿಜೆಪಿ ಪ್ರಣಾಳಿಕೆ ಕುರಿತು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಜನರ ಜೀವನ ಮಟ್ಟ ಹೆಚ್ಚಳ ಹಾಗೂ ಬಡತನ ನಿರ್ಮೂಲನೆ ಮಾಡುವ ಯೋಜನೆ ನಮ್ಮ ಪ್ರಣಾಳಿಕೆಯಲ್ಲಿವೆ. ಕಾಂಗ್ರೆಸ್ ನವರು ಬೇಕಾಬಿಟ್ಟಿಯಾಗಿ ಘೋಷಣೆ ಮಾಡಿದ್ದಾರೆ. ಅವರಿಗೆ ಜವಾಬ್ದಾರಿ ಇಲ್ಲಾ, ಯಾಕೆಂದರೆ ಅವರು ಅಧಿಕಾರಕ್ಕೆ ಬರುವುದು ಗ್ಯಾರಂಟಿ ಇಲ್ಲಾ. ಅವರು ಅಧಿಕಾರಕ್ಕೆ ಬರಲು 272 ಸೀಟ್ ಬೇಕು, ಅವರು ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರದಲ್ಲಿ ಮಾತ್ರ. ಕಾಂಗ್ರೆಸ್ ಪ್ರಣಾಳಿಕೆ ಬೇಜವಾಬ್ದಾರಿ ಪ್ರಣಾಳಿಕೆ ಎಂದರು.