ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿದರು. ಈ ಮೂಲಕ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್ಗೆ 4 ವಿಕೆಟ್ ನಷ್ಟಕ್ಕೆ 206 ರನ್ ಗಳಿಸಿತು. ಈ ಬೃಹತ್ ಮೊತ್ತದ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 20 ಓವರ್ಗೆ 6 ವಿಕೆಟ್ ನಷ್ಟಕ್ಕೆ 186 ರನ್ ಗಳಿಸುವ ಮೂಲಕ 20 ರನ್ ಗಳಿಂದ ಸೋಲನ್ನಪ್ಪಿತು.
ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಮುಂಬೈ ತಂಡಕ್ಕೆ ಆರಂಭದಿಂದಲೂ ರೋಹಿತ್ ಶರ್ಮಾ ಬೆನ್ನೆಲುಭಾಗಿ ನಿಂತರು. ಆದರೆ ರೋಹಿತ್ ಜೊತೆ ಯಾರೋಬ್ಬರೂ ಉತ್ತಮ ಸಾಥ್ ನೀಡಲಿಲ್ಲ. ಇಶಾನ್ ಕಿಶನ್ 15 ಎಸೆತದಲ್ಲಿ 23 ರನ್, ಸೂರ್ಯಕುಮಾರ್ ಯಾದವ್ ಶೂನ್ಯ, ತಿಲಕ್ ವರ್ಮಾ 20 ಎಸೆತದಲ್ಲಿ 5 ಬೌಂಡರಿ ಸಹಿತ 31 ರನ್, ನಾಯಕ ಹಾರ್ದಿಕ್ ಪಾಂಡ್ಯ 2 ರಮ್, ಟೀಮ್ ಡೇವಿಡ್ 5 ಎಸೆತದಲ್ಲಿ 13 ರನ್, ಶೇಫರ್ಡ್ 1 ರನ್ ಗಳಿಸಿದರು. ಆದರೆ ಮುಂಬೈ ಪರ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದರೂ ಸಹ ಪಂದ್ಯವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ರೋಹಿತ್ 63 ಎಸೆತದಲ್ಲಿ 11 ಫೋರ್ ಮತ್ತು 5 ಸಿಕ್ಸ್ ಮೂಲಕ 105 ರನ್ ಗಳಿಸಿ ಅಜೇಯರಾಗಿ ಉಳಿದರು.