ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಏಪ್ರಿಲ್ 15ರಂದು ಅಂದರೆ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು SRH ವಿರುದ್ಧ ಸೆಣಸಾಡಲಿದೆ. ಈಗಾಗಲೇ ಆರ್ಸಿಬಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಫಾಫ್ ಪಡೆಗೆ ಹೀಗಾಗಿ ಈ ಪಂದ್ಯದ ಅತ್ಯಂತ ಮಹತ್ವದ್ದಾಗಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಈವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ 6 ಪಂದ್ಯಗಳಲ್ಲಿ 5ರಲ್ಲಿ ಸೋತಿದ್ದು, ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಆದರೆ SRH ಆಡಿರುವ ಐದು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು 2ರಲ್ಲಿ ಸೋಲನ್ನಪ್ಪಿದೆ. ಈ ಮೂಲಕ ಹೈದರಾಬಾದ್ ಒಟ್ಟು ಆರು ಪಾಯಿಂಟ್ಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಆರ್ಸಿಬಿಗಿಂತ ಹೈದರಾಬಾದ್ ಈ ಬಾರಿ ಬಲಿಷ್ಠವಾಗಿದ್ದು, ಈ ಪಂದ್ಯವು ಏಪ್ರಿಲ್ 15ರ ಸಂಜೆ 7:30ಕ್ಕೆ (IST) ಆರಂಭವಾಗಲಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಉತ್ತಮ ಬ್ಯಾಟಿಂಗ್ ಪಿಚ್ ಹೊಂದಿದೆ. ಹೀಗಾಗಿ ಇದನ್ನು ಬ್ಯಾಟ್ಸ್ಮನ್ ಗಳ ಸ್ವರ್ಗವೆಂದೇ ಕರೆಯಲಾಗುತ್ತದೆ. ಹೀಗಾಗಿ ಮೈದಾನದಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಬಹುದು ಎಂದು ಎಲ್ಲರೂ ಅಂದಾಜಿಸುತ್ತಿದ್ದಾರೆ. ಆದರೆ ಆರ್ಸಿಬಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರೆ ಅದರಿಂದ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎನ್ನಬಹುದು. ಇದರಿಂದ ಅಭಿಮಾನಿಗಳ ಆಸೆ ಸಹ ಈಡೇರುತ್ತದೆ.