ದೇವನಹಳ್ಳಿ:- ಗ್ಯಾರಂಟಿಯಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಹೆಣ್ಣು ಮಕ್ಕಳ ವಿರುದ್ಧ ಕುಮಾರಸ್ವಾಮಿ ಅವಹೇಳನ ಹೇಳಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ನಡೆದಿದೆ. ದೊಡ್ಡಬಳ್ಳಾಪುರ ನೆಲದಾಂಜನೇಯ ಸ್ವಾಮಿ ದೇವಾಲಯದ ಮುಂದೆ ಪ್ರತಿಭಟನೆ ಮಾಡಲಾಗುತ್ತಿದ್ದು, ಗೋಬ್ಯಾಕ್ ಕುಮಾರಸ್ವಾಮಿ ಎಂದು ಮಹಿಳೆಯರು ಆಕ್ರೋಶ ಹೊರಹಾಕುತ್ತಿದ್ದಾರೆ.
ಗೋಬ್ಯಾಕ್ ಬ್ಯಾನರ್ ಮತ್ತು ಕಪ್ಪು ಪಟ್ಟಿ ಕಟ್ಟಿಕೊಂಡು ಮಹಿಳೆಯರು ಆಕ್ರೋಶ ಹೊರ ಹಾಕಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಸಭೆಗೆ ಕುಮಾರಸ್ವಾಮಿ ಬರಬಾರದು ಎಂದು ಆಕ್ರೋಶ ಹೊರ ಹಾಕಿದ್ದಾರೆ.