ತುಮಕೂರು: ತುಮಕೂರಿನ ಕುಂಚಿಟಿಗ ಭವನದಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಚುನಾವಣಾ ಪ್ರಚಾರದ ಕಾರ್ಯಕ್ರಮದಲ್ಲಿ ದೇವೇಗೌಡರು ಭಾಗಿಯಾಗಿದ್ದರು. ಈ ವೇಳೆ ದೇವೇಗೌಡರ ಬಳಿ ಫೋಟೋ ಕ್ಲಿಕ್ಕಿಸಿಕೊಳ್ಳುವ ನೆಪದಲ್ಲಿ ಬಂದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತೆಯರು,
ಮಾಜಿ ಪ್ರಧಾನಿ ಮತ್ತು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಈ ವೇಳೆ ಅಲ್ಲಿಯೇ ಇದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಘೋಷಣೆ ಕೂಗಿದ ಇಬ್ಬರ ಜುಟ್ಟು ಹಿಟ್ಟು ಎಳೆದಾಡಿದರು. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಇಬ್ಬರು ಕಾಂಗ್ರೆಸ್ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದುಕೊಂಡರು.