ಕೊಪ್ಪಳ :- ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಹಾಲಿ ಸಂಸದ ಕರಡಿ ಸಂಗಣ್ಣ ಬಿಜೆಪಿಗೆ ಗುಡ್ಬೈ ಹೇಳಿದ್ದು, ರಾಜೀನಾಮೆ ಕೊಟ್ಟಿದ್ದಾರೆ.
ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಲ್ಲಿಸಿದ್ದಾರೆ. ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಇ-ಮೇಲ್ ಮೂಲಕ ಸ್ಪೀಕರ್ ಓಂ ಬಿರ್ಲಾಗೆ ರಾಜೀನಾಮೆ ರವಾನಿಸಿದ್ದಾರೆ. ಇದೀಗ ಅಧಿಕೃತವಾಗಿ ಬಿಜೆಪಿಗೆ ರಾಜೀನಾಮೆ ನೀಡಿರುವ ಕರಡಿ ಸಂಗಣ್ಣ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾದಂತಾಗಿದೆ.
ಕೆ.ಎಸ್ ಈಶ್ವರಪ್ಪ ಬಂಡಾಯ ಶಮನ ಮಾಡದಿದ್ರೆ ವಿಜಯೇಂದ್ರ ತಲೆದಂಡ ಆಗುತ್ತೆ – ಯತ್ನಾಳ್!
ಕೊಪ್ಪಳ ಲೋಕಸಭಾ ಕ್ಷೇತ್ರದ ಹಾಲಿ ಸಂಸದರೂ ಆಗಿದ್ದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಲೋಕಸಭೆ ಟಿಕೆಟ್ ಕೊಡದೇ ಹೊಸ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಆರಂಭದಿಂದಲೂ ಅಸಮಾಧಾನ ಹೊರ ಹಾಕಿದ್ದ ಕರಡಿ ಸಂಗಣ್ಣ ಅವರು, ನಮ್ಮ ಲೋಕಸಭಾ ಟಿಕೆಟ್ ಅನ್ನು ಪುನಃ ಬದಲಾಯಿಸಿ ತಮಗೆ ಟಿಕೆಟ್ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಆದ್ರೆ, ಇದ್ಯಾವುದಕ್ಕೂ ಬಿಜೆಪಿ ಹೈಕಮಾಂಡ್ ಆಗಲೀ ಅಥವಾ ರಾಜ್ಯ ಬಿಜೆಪಿ ನಾಯಕರಾಗಲೂ ಸೊಪ್ಪು ಹಾಕಲಿಲ್ಲ. ಬದಲಿಗೆ ಮುಂದಿನ ದಿನಗಳಲ್ಲಿ ಸ್ಥಾನಮಾನದ ಭರವಸೆ ನೀಡುವುದಾಗಿ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದ್ರೆ, ಕರಡಿ ಸಂಗಣ್ಣ ಭರವಸೆಗಳನ್ನು ನಿರಾಕರಿಸಿ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೇ ನಾಳೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ.