ಬೆಂಗಳೂರು:- ಮಾಜಿ ಕಾಂಗ್ರೆಸ್ ಶಾಸಕ ಅಖಂಡ ಬುಧವಾರ ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಅಖಂಡ ಬಿಜೆಪಿ ಸೇರ್ಪಡೆಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಗೆ ಅನುಕೂಲವಾಗುವ ಸಾಧ್ಯತೆಯಿದೆ
ಪುಲಿಕೇಶಿನಗರ ಎಸ್ಸಿ ಮೀಸಲು ಕ್ಷೇತ್ರವಾಗಿದ್ದು 2018ರ ಚುನಾವಣೆಯಲ್ಲಿ 81 ಸಾವಿರ ಮತಗಳಿಂದ ಅಖಂಡ ಶ್ರೀನಿವಾಸ ಮೂರ್ತಿ ಗೆಲುವು ಸಾಧಿಸಿದ್ದರು. ಆದರೆ 2023ರ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಬಿಎಸ್ಪಿಯಿಂದ ಸ್ಪರ್ಧಿಸಿದ್ದರು.