ಬೆಂಗಳೂರು: ಹಿರಿಯ ನಟ ದ್ವಾರಕೀಶ್ (Dwarakish) ಅವರ ಅಂತ್ಯಕ್ರಿಯೆಯನ್ನು (Funeral) ಪೊಲೀಸ್ ಗೌರವದೊಂದಿಗೆ (Police honours) ನೆರವೇರಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ರಾಜ್ಯ ಸರಕಾರವು ತೀವ್ರ ಸಂತಾಪ ಸೂಚಿಸಿದ್ದು, ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಬೇಕು ಎಂದು ಪೊಲೀಸ್ ಮಹಾ ನಿರ್ದೇಶಕರಿಗೆ ಅಧಿಸೂಚನೆ ಹೊರಡಿಸಿದೆ.
ಇಂದು ಮಧ್ಯಾಹ್ನ 11.30 ರಿಂದ 12.30ರ ಒಳಗೆ ಅಂತ್ಯಕ್ರಿಯೆ ನಡೆಯಲಿದ್ದು, ಟಿ ಆರ್ ಮಿಲ್ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬ್ರಾಹ್ಮಣ ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಯಲಿದ್ದು, ಮೊದಲಿಗೆ ಪ್ರೇತ ಸಂಸ್ಕಾರ. ಆನಂತರ ಕಿವಿಯಲ್ಲಿ ನಾರಾಯಣ ಸ್ಮರಣೆ. ಚಿತಾ ಅಗ್ನಿ ಹೋಮದ ನಂತರ ಚಿತಾ ಶುದ್ಧಿ , ಭೂ ಸ್ಪರ್ಶ ದಹನ ಮಾಡಿ, ಆಮೇಲೆ ಅಗ್ನಿ ದಿಗ್ಬಂಧನ ಮಾಡಲಾಗುತ್ತಿದೆ. ಕೊನೆಯಲ್ಲಿ ಹಿರಿ ಮಗನಿಂದ ಅಗ್ನಿ ಸ್ಪರ್ಶ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
Rama Navami 2024: ರಾಮ ನವಮಿ ಯಾವಾಗ.? ಪೂಜಾ ವಿಧಿ ವಿಧಾನ, ಮಹತ್ವ ತಿಳಿಯಿರಿ
ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ. ಮನೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಅಭಿಮಾನಿಗಳು ಮತ್ತು ಕಲಾವಿದರು ಆಗಮಿಸಿ, ಅಂತಿಮ ದರ್ಶನ ಪಡೆಯುತ್ತಿದ್ದಾರೆ.