ಬೆಂಗಳೂರು:– ಮಕ್ಕಳ ಆಶ್ಲೀಲ ವಿಡಿಯೋ ಶೇರ್ ಮಾಡುತ್ತಿದ್ದ ವಿಕೃತ ಕಾಮಿಯನ್ನು ಅರೆಸ್ಟ್ ಮಾಡಲಾಗಿದೆ. ಅಸ್ಸಾಂ ಮೂಲದ ನೂರ್ ಇಸ್ಲಾಂ ಚೌದ್ರಿ ಬಂಧಿತ ಆರೋಪಿ ಎನ್ನಲಾಗಿದೆ.
ಕುಡುಕರಿಗೆ ಶಾಕ್: ಬೆಂಗಳೂರಿನ ಈ ಪ್ರದೇಶದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ!
ಆರೋಪಿ ಅಂತರ್ಜಾಲದಲ್ಲಿ ಮಕ್ಕಳ ಆಶ್ಲೀಲ ವಿಡಿಯೋ, ಭಾವಚಿತ್ರಗಳನ್ನ ಡೌನ್ಲೋಡ್ ಮಾಡುತ್ತಿದ್ದ. ನಂತರ ಸ್ನೇಹಿತರಿಗೆ ಹಾಗೂ ವಾಟ್ಸಾಪ್ ಗ್ರೂಪ್ ಗಳಲ್ಲಿ ಶೇರ್ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ನಗರದ ಪೂರ್ವ ವಿಭಾಗ ಸೆನ್ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.
ಹಲವು ವರ್ಷಗಳ ಹಿಂದೆ ಕಾಮುಕ ಬೆಂಗಳೂರಿಗೆ ಬಂದಿದ್ದ. ಕನ್ನಿಂಗ್ ಹ್ಯಾಮ್ ರಸ್ತೆ ಖಾಸಗಿ ಕಂಪನಿಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.