ಬೆಂಗಳೂರು:– ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ವೊಂದು ಬೆಂಕಿಗೆ ಅಹುತಿಯಾದ ಘಟನೆ ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದ ಸಮೀಪ ಜರುಗಿದ್ದು, ಭಾರಿ ದುರಂತವೊಂದು ತಪ್ಪಿದೆ.
ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣಪಾಯದ ವರದಿ ಆಗಿಲ್ಲ. ಜೆ.ಕೆ ಕನೆಕ್ಟ್ ಎಂಬ ಖಾಸಗಿ ಬಸ್ಗೆ ಬೆಂಕಿ ಹೊತ್ತಿಕೊಂಡಿದೆ. ತಾಂತ್ರಿಕ ಕಾರಣದಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಉಪ್ಪಾರಪೇಟೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ