ನವದೆಹಲಿ:- ಇರಾನ್ ಸೀಜ್ ಮಾಡಿದ ಹಡಗಿನಲ್ಲಿದ್ದ ಭಾರತದ ಮಹಿಳಾ ಸಿಬ್ಬಂದಿ ತವರಿಗೆ ವಾಪಸ್ ಆಗಿದ್ದಾರೆ. ಕೇರಳದ ತ್ರಿಶೂರು ಮೂಲದ ಆ್ಯನ್ ತೀಸಾ ಜೊಸೆಫ್ ಮನೆಗೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಆ್ಯನ್ ತೀಸಾ ಜೊಸೆಫ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಇನ್ನುಳಿದ 16 ಸಿಬ್ಬಂದಿಗಳನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಭಾರತಕ್ಕೆ ಕರೆದುಕೊಂಡು ಬರಲಾವುವುದು ಎಂದು ವಿದೇಶಾಂಗ ಇಲಾಖೆ ಹೇಳಿದೆ.
ಕೊನೆ ಚುನಾವಣೆ ಎಂಬ ರಾಮುಲು ಹೇಳಿಕೆ ವಿಚಾರ: ಸಾಫ್ಟ್ ಕಾರ್ನರ್ ತೋರಿದ ಲಾಡ್!
ಈ ಕುರಿತು ಮಾಹಿತಿ ಹಂಚಿಕೊಂಡ ಭಾರತೀಯ ವಿದೇಶಾಂಗ ಇಲಾಖೆ, ಇರಾನ್ ವಶಪಡಿಸಿದ ಸರಕು ಹಡಗಿನಲ್ಲಿದ್ದ ಮಹಿಳಾ ಸಿಬ್ಬಂದಿ ಆ್ಯನ್ ತೀಸಾ ಜೊಸೆಫ್ ಸುರಕ್ಷಿತವಾಗಿ ಮನಗೆ ಮರಳಿದ್ದಾರೆ. ಇರಾನ್ ಆಧಿಕಾರಿಗಳಿಗೆ ಧನ್ಯವಾದ. ಇನ್ನುಳಿದ ಭಾರತೀಯರ ಬಿಡುಗಡೆಗೆ ಇರಾನ್ ಅಧಿಕಾರಿಗಳ ಜೊತೆ ನಿರಂತರ ಮಾತುಕತೆ ನಡೆಯುತ್ತಿದೆ ಎಂದು ಟ್ವೀಟ್ ಮಾಡಿದೆ.
ತೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು, ಇರಾನ್ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಭಾರತ ವಿದೇಶಾಂಗ ಇಲಾಖೆ ಭಾರತೀಯರ ಸುರಕ್ಷಿತ ಬಿಡುಗಡೆ ಒತ್ತಾಯಿಸಿತ್ತು. ಖುದ್ದು ಕೇಂದ್ರ ಸಚಿವ ಜೈಶಂಕರ್ ಸಹ ಇರಾನ್ ಜತೆ ಮಾತುಕತೆ ನಡೆಸಿ ಭಾರತೀಯರನ್ನು ಬಿಟ್ಟು ಕಳುಹಿಸುವಂತೆ ಮನವಿ ಮಾಡಿದ್ದು, ರಾಜತಾಂತ್ರಿಕ ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಿತ್ತು. ಇದರ ಪರಿಣಾಮ ಇರಾನ್, ಭಾರತೀಯ ಮಹಿಳಾ ಸಿಬ್ಬಂದಿಯನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟಿದೆ.
ಇರಾನ್ ವಶಪಡಿಸಿದ ಹಡಗಿನಲ್ಲಿದ್ದ ಸಿಬ್ಬಂದಿಗಳ ಪೈಕಿ 17 ಭಾರತೀಯರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಪೈಕಿ ಮಹಿಳಾ ಸಿಬ್ಬಂದಿ ಆ್ಯನ್ ತೀಸಾ ಜೊಸೆಫ್ ಭಾರತಕ್ಕೆ ಮರಳಿದ್ದಾರೆ. ಆದ್ರೆ, ಇನ್ನುಳಿದ 16 ಸಿಬ್ಬಂದಿಗಳನ್ನು ಶೀಘ್ರದಲ್ಲೇ ಸುರಕ್ಷಿತವಾಗಿ ಭಾರತಕ್ಕೆ ಕರೆದುಕೊಂಡು ಬರಲಾವುವುದು ಎಂದು ವಿದೇಶಾಂಗ ಇಲಾಖೆ ಹೇಳಿದೆ.