ಬೆಂಗಳೂರು:- ಇಂದು ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಇಂದು ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗಿದ್ದು, ಬಿಸಿಲಿನ ಝಳಕ್ಕೆ ರೋಸಿ ಹೋಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಗಂಟೆಗೆ 30 ರಿಂದ 40 ಕಿಲೋ ಮೀಟರ್ ಗಾಳಿ ವೇಗವಾಗಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಜನ ಎಚ್ಚರದಿಂದ ಇರುವಂತೆ ತಿಳಿಸಿದೆ.
ಇನ್ನೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಧಾರವಾಡ, ವಿಜಯನಗರದ ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.