ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ ಇಂದು ಮುಖಾಮುಖಿಯಾಗಿದೆ. ಟಾಸ್ ಗೆದ್ದ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
UIDAI Recruitment: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿದೆ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 35,000 ಸಂಬಳ
ಐಪಿಎಲ್ 2024 ರ 38 ನೇ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ. ಸದ್ಯ ರಾಜಸ್ಥಾನ್ ರಾಯಲ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಮುಂಬೈ ಇಂಡಿಯನ್ಸ್ ತಂಡ 7ನೇ ಸ್ಥಾನದಲ್ಲಿದೆ. ಉಭಯ ತಂಡಗಳ ನಡುವೆ ಇದು ಈ ಸೀಸನ್ನ ಎರಡನೇ ಪಂದ್ಯ ಇದಾಗಿದೆ. ಇದಕ್ಕೂ ಮುನ್ನ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್ಗಳಿಂದ ಜಯ ಸಾಧಿಸಿತ್ತು.