ಬಳ್ಳಾರಿ:- 2024 ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಕರ್ನಾಟಕದಲ್ಲಿ ನಡೆಯುತ್ತಿರುವ ಹೊತ್ತಲ್ಲೇ ಗಣಿನಾಡಿನಲ್ಲಿ ಇವತ್ತು ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಮಾಡಲಿದೆ.
Lokasabha Election: ಇಂದು ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ರಾಹುಲ್ ಗಾಂಧಿ!
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಇವತ್ತು ಗಣಿನಾಡಿಗೆ ರಾಹುಲ್ ಗಾಂಧಿ ಎಂಟ್ರಿ ಕೊಡುತ್ತಿದ್ದು, ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜ್ ಮೈದಾನದಲ್ಲಿ ಕಾಂಗ್ರೆಸ್ ಬಹಿರಂಗ ಸಮಾವೇಶ ನಡೆಯಲಿದೆ. ಸಂಜೆ 4 ಗಂಟೆಗೆ ಬಳ್ಳಾರಿ ನಗರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಂಟ್ರಿ ಕೊಡಲಿದ್ದಾರೆ. ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ಸಚಿವರು ಭಾಗಿಯಾಗಲಿದ್ದಾರೆ. ಒಂದು ಲಕ್ಷ ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ. 1999 ರಲ್ಲಿ ಸೋನಿಯಾ ಗಾಂಧಿ ಬಳ್ಳಾರಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸಿದರು. ಹೀಗಾಗಿ ಬಳ್ಳಾರಿ ಜಿಲ್ಲೆಯ ಬಗ್ಗೆ ರಾಹುಲ್ ಗಾಂಧಿ ವಿಶೇಷ ಒಲವು ಹೊಂದಿದ್ದಾರೆ.