ಮಂಡ್ಯ: ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 164ರಲ್ಲಿ ಸಂಸದೆ ಸುಮಲತಾ ಅಂಬರೀಶ್ ಮತದಾನ ಮಾಡಿದರು. ವೋಟ್ ಬಳಿಕ ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಮತದಾನ ಮಾಡೋದು ಕರ್ತವ್ಯ, ಅದನ್ನು ನಾನು ನಿರ್ವಹಿಸಿದ್ದೀನಿ ಎಂದರು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲ್ಲ. ಅವರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಇಲ್ಲದೆ ಆ ರೀತಿ ಹೇಳಿದ್ದಾರೆ. ಆದರೆ ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಸ್ವತಂತ್ರ ಸಂಸದೆಯಾಗಿ ನನ್ನ ಜವಾಬ್ದಾರಿಯನ್ನು ನಾನು ನಿರ್ವಹಿಸಿದ್ದೀನಿ. ಮೋದಿಯವರು ಪ್ರಧಾನಿಯಾಗಬೇಕೆಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ತ್ಯಾಗ ಮಾಡಿದ್ದೇನೆ.
Supreme Court: ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್: ಇವಿಎಂ-ವಿವಿಪ್ಯಾಟ್ ಸಂಪೂರ್ಣ ಎಣಿಕೆ ಅರ್ಜಿಗಳ ವಜಾ
ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್ಡಿಎಗೆ ಕೊಟ್ಟಿದ್ದೇವೆ ಎಂದು ಹೇಳಿದರು. ಮುಂದುವರೆದು, ‘ಮೈತ್ರಿ ಪಕ್ಷ ಪರ ನಮ್ಮ ಬೆಂಬಲಿಗರು ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಆದರೆ ಜೆಡಿಎಸ್ ನಾಯಕರು ಯಾವುದೇ ಸಭೆ, ಪ್ರಚಾರಕ್ಕೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೆ ಇದ್ದರೆ ತಪ್ಪಾಗುತ್ತೆ. ಆದರೆ ಅವರು ನನ್ನ ಕರೆದೇ ಇಲ್ಲವೆಂದು ಅಸಮಧಾನ ಹೊರಹಾಕಿದರು.