ಕಲಬುರ್ಗಿ:- ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಸಂಸದ ನಿಧನ: ಶ್ರೀನಿವಾಸ್ ಪ್ರಸಾದ್ ಪಾರ್ಥಿವ ಶರೀರ ಮೈಸೂರಿಗೆ ರವಾನೆ..!
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಯಾವತ್ತಿಗೂ ನುಡಿದಂತೆ ನಡೆಯುವ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ನಾವು ನೀಡಿದ 5 ಗ್ಯಾರಂಟಿಗಳನ್ನು ಜಾರಿಗೆ ತರಲ್ಲ ಅಂತಅ ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದರು, ಅದರೆ ಅವುಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿತು. ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗಿದೆ, ಹಾಗಾಗಿ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ ಅಂತಲೂ ಅಪಪ್ರಚಾರ ಮಾಡಿದರು.
ಈಗ ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ನಿಂತು ಹೋಗುತ್ತವೆ ಅಂತ ಮತ್ತೇ ಅದೇ ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂದ ಸಿದ್ದರಾಮಯ್ಯ, ನಮ್ಮ ಮೇಲೆ ನಿಮಗೆ ವಿಶ್ವಾಸವಿರಲಿ, ಯಾವ ಕಾರಣಕ್ಕೂ ಸರ್ಕಾರದ ಅವಧಿ ಮುಗಿಯುವವರೆಗೆ ಅವುಗಳನ್ನು ನಿಲ್ಲಿಸಲ್ಲ ಮತ್ತು ಮುಂದಿನ ಅವಧಿಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿರುವುದರಿಂದ ಅ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ..