ಬೆಂಗಳೂರು:- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಫೋಟೋಗೆ ಬೇರೊಂದು ಅಶ್ಲೀಲ ಚಿತ್ರ ವೈರಲ್ ಆಗಿದ್ದು, ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ.
ಹಿಂದೆ ಸಿದ್ದರಾಮಯ್ಯ ಕುಟುಂಬದ ಮಾನ ಉಳಿಸಿದ್ದು ಪ್ರಧಾನಿ ಮೋದಿ – HDK..!
ಅಶ್ಲೀಲ ಚಿತ್ರಕ್ಕೆ ಡಿ.ಕೆ.ಶಿವಕುಮಾರ್ ಫೋಟೋ ಮಾರ್ಫಿಂಗ್ ಮಾಡಲಾಗಿದೆ ಎಂದು ಆರೋಪಿಸಿ ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು ದಾಖಲಿಸಿದೆ.
ಬಿಜೆಪಿ ಮುಖಂಡರ ಅಶ್ಲೀಲ ಭಾವಚಿತ್ರಕ್ಕೆ ಡಿಕೆ ಶಿವಕುಮಾರ್ ಮುಖ ಜೋಡಣೆ ಮಾಡಲಾಗಿದ್ದು, ಇದೀಗ ಆ ಎಡಿಟ್ ಫೋಟೋವನ್ನು ವೈರಲ್ ಮಾಡಲಾಗಿದೆ. ಫೇಸ್ಬುಕ್, ಯೂಟ್ಯೂಬ್, ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಹೀಗಾಗಿ ಕಾನೂಕ ಕ್ರಮಕೈಗೊಳ್ಳಬೇಕೆಂದು ಕೆಪಿಸಿಸಿ ಕಾನೂನು ಘಟಕ ದೂರು ನೀಡಿದೆ. ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಸಂತೋಷ್, ರಾಜೇಶ್, ಕೇಸರಿ ಸಾಮ್ರಾಟ್ ವಿರುದ್ಧ FIR ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.