ಬೆಂಗಳೂರು:- ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಬೊಮ್ಮಸಂದ್ರ ಸರ್ವಿಸ್ ರಸ್ತೆಯಲ್ಲಿ ಇನ್ನೋವಾ ಕಾರೊಂದು ಗೂಡ್ಸ್ ಆಟೋ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಉಂಟಾದ ಘಟನೆ ಜರುಗಿದೆ.
ಚುನಾವಣೆ ಟೈಮಲ್ಲೇ ದೆಹಲಿ ಸಿಎಂ ಬಂಧನ ಯಾಕೆ..!? – ಇಡಿಗೆ ಸುಪ್ರೀಂ ನೇರ ಪ್ರಶ್ನೆ..!
ಇನ್ನೋವಾ ಕಾರು ಬೆಂಗಳೂರು ಕಡೆಯಿಂದ ಚಂದಾಪುರ ಮಾರ್ಗವಾಗಿ ಬರುತ್ತಿತ್ತು. ಈ ವೇಳೆ ಚಾಲಕನ ಅತಿಯಾದ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದ ಮುಂದೆ ಬರುತ್ತಿದ್ದ ಗೂಡ್ಸ್ ಆಟೋ, ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಘಟನೆಯಿಂದ ಹೆದ್ದಾರಿಯಲ್ಲಿದ್ದ ಬ್ಯಾರಿಕೇಡ್ ಮುರಿದು ಬಿದ್ದು ವಾಹನಗಳು ಜಖಂ ಆಗಿದ್ದು, ದ್ವಿಚಕ್ರ ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಅಪಘಾತ ಹಿನ್ನೆಲೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.