ಬೆಂಗಳೂರು:- ಕೊಡಿಗೇಹಳ್ಳಿಯ ವಿರೂಪಾಕ್ಷಪುರದಲ್ಲಿ ಪತಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ ಘಟನೆ ಜರುಗಿದೆ.
ರಾತ್ರಿ 10.30 ರ ವೇಳೆಗೆ ನಡೆದುಕೊಂಡು ಹೋಗುತ್ತಿದ್ದ ಬಿಹಾರ ಮೂಲದ ದಂಪತಿಗೆ ಪುಂಡರು ಕಿರುಕುಳ ನೀಡಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕಿರುಕುಳ ನೀಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ.
ನಂತರ ದಂಪತಿ ಅಲ್ಲಿಂದ ಓಡಿಹೋಗಲು ಮುಂದಾಗಿದ್ದಾರೆ. ಅಷ್ಟರಲ್ಲಿ ಅವರನ್ನು ಅಟ್ಟಾಡಿಸಿಕೊಂಡು ಹೋದ ಪುಂಡರು, ಹೆಂಡತಿಯನ್ನು ಕಳುಹಿಸಿಕೊಡುವಂತೆ ಗಂಡನಿಗೆ ಬೆದರಿಕೆ ಹಾಕಿದ್ದಾರೆ. ತಕ್ಷಣವೇ ದಂಪತಿ ಸಹಾಯ ಕೋರಿ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಬಳಿಕ ಬಿಹಾರ ಪೊಲೀಸರಿಗೂ ಫೋನ್ ಮಾಡಿ ನೆರವು ಕೋರಿದ್ದಾರೆ. ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ