ಬೆಂಗಳೂರು: ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದು ಗೊತ್ತಾಗಿದೆ. ಪ್ರಜ್ವಲ್ ಅವರನ್ನು ಕರೆತರಲು ಎಸ್ಐಟಿ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಪ್ರಕರಣ ಯಾವ ಸೆಕ್ಷನ್ ಅಡಿಯಲ್ಲಿ ಬರುತ್ತದೆ? ಅದರಲ್ಲಿ ಬಂಧಿಸಲು ಅವಕಾಶ ಇದೆಯೇ? ಜಾಮೀನು ಪಡೆಯುವಂತಹ ಪ್ರಕರಣವೇ? ಈ ಅಂಶಗಳನ್ನೆಲ್ಲ ಪರಿಗಣಿಸಬೇಕಾಗುತ್ತದೆ.
ಸಿಆರ್ಪಿಸಿ ಸೆಕ್ಷನ್ 41a ಅಡಿ ಎಎಸ್ಐ ನೋಟಿಸ್ ಕೊಟ್ಟಿದ್ದಾರೆ. ಅದರಂತೆ, ಆರೋಪ ಹೊತ್ತವರು 24 ಗಂಟೆಯ ಒಳಗೆ ಬಂದು ವಿಚಾರಣೆಗೆ ಹಾಜರಾಗಬೇಕು. ವಿಚಾರಣೆಗೆ ಹಾಜರಾಗದೇ ಹೋದರೆ ಎಸ್ಐಟಿ ತಂಡ ಮುಂದಿನ ಪ್ರಕ್ರಿಯೆ ಮಾಡಲಿದೆ. ನಾವು ಎಸ್ಐಟಿ ರಚನೆ ಮಾಡಿ ತನಿಖೆಗೆ ವಹಿಸಿದ್ದೇವೆ” ಎಂದರು.
KEA Recruitment: PU ಪಾಸಾದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ.! ತಿಂಗಳಿಗೆ 42 ಸಾವಿರ ಸಂಬಳ
”ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವುದು ಗೊತ್ತಾಗಿದೆ. ಪ್ರಜ್ವಲ್ ಅವರನ್ನು ಕರೆತರಲು ಎಸ್ಐಟಿ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಕೇಂದ್ರದ ಸಹಾಯ ಬೇಕಾಗಬಹುದು ಅಥವಾ ಎಸ್ಐಟಿ ತಂಡದವರೇ ಕರೆದುಕೊಂಡು ಬರಬಹುದು” ಎಂದು ಪರಮೇಶ್ವರ್ ತಿಳಿಸಿದರು. ಎಸ್ಐಟಿ ರಚನೆ ಬಳಿಕವೂ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಲೀಕ್ ಆದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ”ಅದೆಲ್ಲವನ್ನು ಎಸ್ಐಟಿ ತಂಡ ಗಮನಿಸುತ್ತದೆ. ಅದಕ್ಕೆ ನಾವೇನೂ ಹೇಳಲು ಬರುವುದಿಲ್ಲ” ಎಂದರು.