ಬಳ್ಳಾರಿ: ಗಣಿಜಿಲ್ಲೆ ಬಳ್ಳಾರಿಯಲ್ಲಿ ತೀವ್ರ ಶಾಖಾಘಾತದ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬಳ್ಳಾರಿಯಲ್ಲಿ 43 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ತಾಪಮಾನ 46 ಡಿಗ್ರಿ ಸೆಲ್ಸಿಯಸ್ ವರೆಗೂ ಹೆಚ್ಚಳ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಕ್ಕಳು, ಖಾಯಿಲೆಗಳಿಂದ ಬಳಲುತ್ತಿರುವವರು, ಬಾಣಂತಿಯರು, ವೃದ್ಧರು ಬಿಸಿಲಿಗೆ ಹೋಗದಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಜನರಿಗೆ ಸಲಹೆ ನೀಡಲಾಗಿದೆ. ಇನ್ನೂ ಮೂರು ದಿನದವರೆಗೆ ಹೀಟ್ ವೇವ್ ಮುಂದುವರೆಯುವ ಸಾಧ್ಯತೆಯಿದ್ದು, ಜನರು 12 ರಿಂದ 3 ಗಂಟೆವರೆಗೆ ಬಿಸಿಲಿಗೆ ಹೋಗುವುದನ್ನ ಆದಷ್ಟು ತಪ್ಪಿಸಿ ಅಂತ ಆರೋಗ್ಯ ಇಲಾಖೆ ಸಲಹೆ ನೀಡಿದ್ದಾರೆ.