ಮೈಸೂರು:-ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಮೈಸೂರಿನಲ್ಲಿಯೂ ಕೇಸ್ ದಾಖಲಾಗಿದೆ.
ಮಹಿಳೆಯರಿಗೆ ರಕ್ಷಣೆ, ನೆಮ್ಮದಿ ಸಿಕ್ಕಿದ್ದು ಮೋದಿ ಆಡಳಿತದಲ್ಲಿ – ಅಣ್ಣಾಮಲೈ
ಮೈಸೂರು ಜಿಲ್ಲೆಯ ಕೆಆರ್ ನಗರದಲ್ಲಿ ಮಹಿಳೆಯೊಬ್ಬರು ಕಾಣೆಯಾಗಿರುವ ಬಗ್ಗೆ ಹೆಚ್ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿದೆ. ನಾಪತ್ತೆಯಾಗಿರುವ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಅಶ್ಲೀಲ ವಿಡಿಯೋ ವಿವಾದದಲ್ಲಿ ನನ್ನ ತಾಯಿಯ ಚಿತ್ರವೂ ಇದೆ. ವಿಡಿಯೋಗಳು ಬಹಿರಂಗವಾದ ಬಳಿಕ ತಾಯಿ ದಿಢೀರ್ ನಾಪತ್ತೆಯಾಗಿದ್ದಾರೆ’ ಎಂದು ಸಂತ್ರಸ್ತ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ. ಈ ಮಧ್ಯೆ, ಮೈಸೂರು ಪೊಲೀಸ್ ಹೆಚ್ಚುವರಿ ಆಯುಕ್ತೆ ಕೆಆರ್ ನಗರ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಸದ್ಯ ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣ ದೇಶದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಲೋಕಸಭೆ ಚುನಾವಣೆ ಸಂದರ್ಭದಲ್ಲೇ ಬೆಳಕಿಗೆ ಬಂದಿರುವ ಈ ಪ್ರಕರಣ ರಾಜಕೀಯವಾಗಿ ಬಹಳಷ್ಟು ಆರೋಪ ಪ್ರತ್ಯಾರೋಪಗಳಿಗೆ ಕಾರಣವಾಗುತ್ತಿದೆ