ಕೊಹ್ಲಿಯ ಕಳಪೆ ಸ್ಟ್ರೈಕ್ ರೇಟ್ ಬಗ್ಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ರೋಹಿತ್ ಅವರನ್ನೂ ಕೇಳಲಾಗಿತ್ತು. ಆದರೆ, ಅವರು ಜೋರಾಗಿ ನಕ್ಕು ಇದೊಂದು ಚರ್ಚೆಯ ವಿಷಯವೇ ಅಲ್ಲ ಎಂಬುದಾಗಿ ಹೇಳಿದ್ದಾರೆ.
ಸದ್ಯ ಐಪಿಎಲ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಕೆ.ಎಲ್ ರಾಹುಲ್ ಉತ್ತಮ ಪ್ರದರ್ಶನವನ್ನೇ ನೀಡುತ್ತಿದ್ದಾರೆ. ಆದರೆ ನಮಗೆ ಮಧ್ಯಮ ಕ್ರಮಾಂಕದ ಬ್ಯಾಟರ್ಗಳ ಅಗತ್ಯತ್ತು. ಆದ್ದರಿಂದ ರಿಷಭ್ ಪಂತ್, ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದೇವೆ. ರಾಹುಲ್ಗೆ ಮುಂದೆ ಉತ್ತಮ ಅವಕಾಶಗಳಿವೆ ಎಂದು ರೋಹಿತ್, ಅಗರ್ಕರ್ ತಿಳಿಸಿದ್ದಾರೆ.
ರಿಂಕು ಸಿಂಗ್ ಅವರನ್ನು ಕಡೆಗಣಿಸಿದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ ಮಾತನಾಡಿ, ರಿಂಕು ಸಿಂಗ್ ಅವರನ್ನು ಕೈ ಬಿಟ್ಟ ನಿರ್ಧಾರ ಕಠಿಣವಾಗಿತ್ತು. ಏಕೆಂದರೆ, ವೆಸ್ಟ್ ಇಂಡೀಸ್ ಹಾಗೂ ಅಮೆರಿಕ ಕಂಡೀಷನ್ಸ್ ಬಗ್ಗೆ ನಮಗೆ ಗೊತ್ತಿಲ್ಲ. ಈ ಕಾರಣದಿಂದ ನಾವು ಹೆಚ್ಚಿನ ಬೌಲಿಂಗ್ ಆಯ್ಕೆಗಳನ್ನು ಉಳಿಸಿಕೊಂಡಿದ್ದೇವೆ ಎಂದಿದ್ದಾರೆ.