ಚಿಕ್ಕಮಗಳೂರು:- ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಮಹಿಳಾ ಸರ್ಕಾರಿ ಅಧಿಕಾರಿಗಳಿಗೆ SIT ನೋಟಿಸ್ ಜಾರಿ ಮಾಡಿದೆ.
ತನಿಖೆಗೆ ಸಹಕಾರ ನೀಡದ ಹಿನ್ನೆಲೆ ಮಹಿಳಾ ಅಧಿಕಾರಿಳಿಗೆ ಎಸ್ಐಟಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವೈರಲ್ ಆಗಿರುವ ವಿಡಿಯೋಗಳಲ್ಲಿ ಕೆಲ ಸರ್ಕಾರಿ ಮಹಿಳಾ ಅಧಿಕಾರಿಗಳ ಫೋಟೋಗಳು ಬಹಿರಂಗವಾಗಿರುವ ಹಿನ್ನೆಲೆ ನೋಟಿಸ್ ಕೊಡಲಾಗಿದೆ
ಇತ್ತ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿರುವ ಹಿನ್ನೆಲೆ ಮಹಿಳಾ ಸರ್ಕಾರಿ ಅಧಿಕಾರಿಗಳು ರಜೆ ಮೇಲೆ ತೆರಳಿದ್ದಾರೆ. ಹೀಗಾಗಿ ಮಹಿಳಾ ಅಧಿಕಾರಿಗಳು ಎಸ್ಐಟಿಯ ಸಂಪರ್ಕಕ್ಕೂ ಸಿಗುತ್ತಿಲ್ಲ. ಆದ್ದರಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಮೂಲಕ ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.