ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಬೆಳ್ಳಂ ಬೆಳಗ್ಗೆ ಮಳೆ ಆಗಿದೆ.
SIT ಕಸ್ಟಡಿ ಅಂತ್ಯ.. ಇಂದು ರೇವಣ್ಣಗೆ ಬೇಲ್ ಸಿಗುತ್ತಾ? ಅಥವಾ ಜೈಲು ಪಾಲಾಗ್ತಾರಾ!?
ಜಯನಗರ, ಕೋಣನಕುಂಟೆ ಕ್ರಾಸ್, ಬಸವನಗುಡಿ, ಜೆಸಿ ರಸ್ತೆ, ಕೆಆರ್ ಮಾರುಕಟ್ಟೆ ಸೇರಿದಂತೆ ಬೆಂಗಳೂರಿನ ಹಲವು ಕಡೆಗಳಲ್ಲಿ ಬೆಳಗ್ಗೆ ಮಳೆ ಸುರಿದಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ ಇನ್ನು ಕೆಲವೆಡೆ ಧಾರಾಕಾರ ಮಳೆ ಸುರಿಯಿತು. ನಗರದಲ್ಲಿ ಇಂದು ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಹಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಳಗ್ಗೆ ಮತ್ತು ರಾತ್ರಿ ಮಳೆಯಾಗಬಹುದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಬುಧವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಇದು ನಗರದಲ್ಲಿ ಭಾರೀ ಮಳೆಯಾಗಲಿದೆ ಎಂಬುದನ್ನು ಸೂಚಿಸುತ್ತದೆ. ಮಳೆಯ ಜೊತೆಗೆ ಬಿರುಗಾಳಿ ಸಹಿತ ಗಾಳಿ ಬೀಸಬಹುದು ಎಂದು ಎಚ್ಚರಿಕೆ ನೀಡಿದೆ. ಏಪ್ರಿಲ್ನಲ್ಲಿ ಒಣ ಹವೆಯ ನಂತರ ಬೆಂಗಳೂರು ನಗರವು ಮೇ ತಿಂಗಳಲ್ಲಿ ಸಾಧಾರಣ ಮಳೆಗೆ ಸಾಕ್ಷಿಯಾಗುತ್ತಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ 128.7 ಮಿಮೀ ಮಳೆಯಾಗುತ್ತದೆ.
ಮುಂದಿನ ಎರಡು ದಿನಗಳಲ್ಲಿ ನಗರದಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸಂಜೆ ಅಥವಾ ರಾತ್ರಿ ವೇಳೆಗೆ ಮಾತ್ರ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ. ಮುಂದಿನ ಎರಡು ದಿನಗಳಲ್ಲಿ ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮೇ ತಿಂಗಳ ಆರಂಭದಿಂದಲೂ ನಗರದಲ್ಲಿ ಮಳೆಯಾಗುತ್ತಿದೆ. ಪರಿಣಾಮವಾಗಿ, ತಾಪಮಾನವು ಗಮನಾರ್ಹವಾಗಿ ಕಡಿಮೆಯಾಗಿದೆ. ತಿಂಗಳ ಆರಂಭದಲ್ಲಿದ್ದ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ನಿಂದ, ಮಂಗಳವಾರ 33.8 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ.