ದುಬೈ: 9ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ನಲ್ಲಿ ಸಾಂಪ್ರದಾಯಿಕ ಬದ್ಧವೈರಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು ಅಕ್ಟೋಬರ್ 6ರಂದು ಪರಸ್ಪರ ಸೆಣಸಾಡಲಿವೆ. ಬಾಂಗ್ಲಾದಲ್ಲಿ ಅಕ್ಟೋಬರ್ 3ರಿಂದ ಅಕ್ಟೋಬರ್ 20ರ ವರೆಗೆ ನಡೆಯಲಿರುವ ಟೂರ್ನಿಯಲ್ಲಿ 10 ತಂಡಗಳು ಪಾಲ್ಗೊಳ್ಳಲಿವೆ. ಭಾನುವಾರ ಐಸಿಸಿ ಟೂರ್ನಿಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, 2020ರ ರನ್ನರ್-ಅಪ್ ಭಾರತ ತಂಡ ‘ಎ’ ಗುಂಪಿನಲ್ಲಿ ಸ್ಥಾನ ಗಿಟ್ಟಿಸಿಕೊಂಡಿದೆ.
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಕೂಡಾ ಇದೇ ಗುಂಪಿನಲ್ಲಿವೆ. ಭಾರತ ಅ.4ರಂದು ನ್ಯೂಜಿಲೆಂಡ್ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದ್ದು, ಅ.9ಕ್ಕೆ ಕ್ವಾಲಿಫೈಯರ್ 1 ತಂಡ ಎದುರಾಗಲಿದೆ. 6 ಬಾರಿ ಚಾಂಪಿಯನ್ ಆಸೀಸ್ ವಿರುದ್ಧ ಅ.13ಕ್ಕೆ ಆಡಲಿದೆ. ಆತಿಥೇಯ ಬಾಂಗ್ಲಾದೇಶ, ದ.ಆಫ್ರಿಕಾ. ಇಂಗ್ಲೆಂಡ್, ವೆಸ್ಟ್ಇಂಡೀಸ್ ಹಾಗೂ ಕ್ವಾಲಿಫೈಯರ್ 2 ತಂಡ ‘ಬಿ’ ಗುಂಪಿನಲ್ಲಿವೆ. ಪ್ರತಿ ಗುಂಪಿನ ಅಗ್ರ-2 ತಂಡಗಳು ನಾಕೌಟ್ಗೇರಲಿವೆ. ಅ.20ಕ್ಕೆ ಫೈನಲ್ ಪಂದ್ಯ ನಡೆಯಲಿದೆ.